
ಕರ್ನಾಟಕ ರಕ್ಷಣಾ ವೇದಿಕೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಈ ಮೂಲಕ ತಮ್ಮ ಗಮನಕ್ಕೆ ತರಲು ಬಯಸುವುದೇನೆಂದರೆ, ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ತೆಗೆಯಲು ನಿಷೇಧ ಮತ್ತು ಮರಳುಗಾರಿಕೆಗೆ ವಿಧಿಸಿರುವ ನಿರ್ಬಂಧದಿಂದ ಜನರು ಕಟ್ಟಡ ಮತ್ತು ಮನೆ ನಿರ್ಮಿಸಲು ಆಗದೆ ಸಮಸ್ಯೆ ಎದುರಿಸುವಂತಾಗಿದೆ. ಬಡ ಮತ್ತು ಮಧ್ಯಮ ವರ್ಗದ ಜನ ತಮ್ಮ ಕನಸಿನ ಮನೆ ನಿರ್ಮಾಣ ಮಾಡಲು ಪರದಾಡುವಂತಾಗಿದೆ.
ಕಟ್ಟಡ ನಿರ್ಮಾಣದ ಕೆಲಸವನ್ನೇ ನಂಬಿಕೊಂಡ ಕೂಲಿ ಕಾರ್ಮಿಕರ ಜೀವನ ಬೀದಿಗೆ ಬರುವ ಭಯ ತಲೆದೋರಿದೆ. ಕಟ್ಟಡ ನಿರ್ಮಾಣ ಮತ್ತು ಇದಕ್ಕೆ ಸಂಬಂಧಿಸಿದ ಅನೇಕ ಉದ್ಯೋಗಿಗಳು ಸಾವಿರಾರು ಸಂಖ್ಯೆಯಲ್ಲಿದ್ದು, ಅವರು ಒಂದು ಹೊತ್ತಿನ ಊಟವನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದು, ನಿರುದ್ಯೋಗ ಸಮಸ್ಯೆ ತಲೆದೋರಲಿದೆ. ಆದುದರಿಂದ ಸಮಾಜದ ಎಲ್ಲಾ ವರ್ಗದ ಜನರ ಹಿತಾಸಕ್ತಿಯನ್ನು ಗಮನಕ್ಕೆ ತೆಗೆದುಕೊಂಡು ಸದ್ರಿ ನಿರ್ಬಂಧವನ್ನು ತೆರವುಗೊಳಿಸಿ ಜನರ ಸುಗಮ ಜೀವನಕ್ಕೆ ಅನುವು ಮಾಡಿಕೊಡಬೇಕಾಗಿ ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇವೆ.
ಒಂದು ವೇಳೆ ನಿರ್ಬಂಧವನ್ನು ತೆರವು ಮಾಡದಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ. ಉಡುಪಿ ಜಿಲ್ಲೆ ಘಟಕದ ವತಿಯಿಂದ ಎಲ್ಲಾ ವರ್ಗದ ಕಾರ್ಮಿಕರನ್ನು ಸಂಘಟಿಸಿ, ಬೃಹತ್ ಪ್ರತಿಭಟನೆ ಕೈಗೊಳ್ಳಬೇಕಾಗ ಬಹುದೆಂದು ಈ ಮೂಲಕ ತಿಳಿಸಲು ಬಯಸುತ್ತೇವೆ. ಎಂದು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ ) ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರಿಕೆ ಪ್ರಕಟಣೆಯಲ್ಲಿ ಮೂಲಕ ಒತ್ತಾಯಿಸಿದ್ದಾರೆ.
Leave a Reply