
ಕೋಟ : ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜಶಾಸ್ತç ಉಪನ್ಯಾಸಕರಾಗಿ 30 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ ಇಲಾಖೆ ನಿಯಮದಂತೆ ವಯೋ ನಿವೃತ್ತಿ ಹೊಂದಿದ ಅಶೋಕ್ ಕುಮಾರ್ ಶೆಟ್ಟಿ ಇವರನ್ನು ಕೋಟ ವಿದ್ಯಾ ಸಂಘ ಮತ್ತು ವಿವೇಕ ವಿದ್ಯಾಸಂಸ್ಥೆಗಳ ಸಿಬ್ಬಂದಿ ವರ್ಗದ ಆಶ್ರಯದಲ್ಲಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾ ಸಂಘದ ಅಧ್ಯಕ್ಷ ಸಿ.ಎ ಪಿ.ಪ್ರಭಾಕರ ಮಯ್ಯ ವಹಿಸಿ ನಿವೃತ್ತರ ಸೇವೆಯನ್ನು ಸ್ಮರಿಸಿಕೊಂಡರು. ಕಾರ್ಯದರ್ಶಿ ಎಂ, ರಾಮದೇವ ಐತಾಳ್ ನಿವೃತ್ತರ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಉಪನ್ಯಾಸಕ ಸಂಜೀವ ಜಿ, ಮತ್ತು ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ ಇವರು ನಿವೃತ್ತರ ಕುರಿತಾಗಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಅಶೋಕ್ ಕುಮಾರ್ ಶೆಟ್ಟಿ ಸನ್ಮಾನ ಸ್ವೀಕರಿಸಿ ತಮ್ಮ ಸೇವಾ ಜೀವನದ ಅನುಭವಗಳನ್ನು ಹಂಚಿಕೊoಡರು.
ಪ್ರಾoಶುಪಾಲ ಜಗದೀಶ ನಾವಡ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಪ್ರೀತಿ ರೇಖಾ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಪದಾಧಿಕಾರಿಗಳು, ವಿದ್ಯಾ ಸಂಸ್ಥೆಗಳ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು. ಬಾಲಕರ ಪ್ರೌಢಶಾಲೆಯ ಮುಖ್ಯಸಹ ಶಿಕ್ಷಕ ಪ್ರೇಮಾನಂದ ವಂದಿಸಿ, ಶಿಕ್ಷಕಿ ರತಿ ಬಾಯಿ ಕಾರ್ಯಕ್ರಮ ನಿರೂಪಿಸಿದರು.
ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ಇಲಾಖೆ ನಿಯಮದಂತೆ ವಯೋ ನಿವೃತ್ತಿ ಹೊಂದಿದ ಅಶೋಕ್ ಕುಮಾರ್ ಶೆಟ್ಟಿ ಇವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಕೋಟ ವಿದ್ಯಾ ಸಂಘದ ಅಧ್ಯಕ್ಷ ಸಿ.ಎ ಪಿ.ಪ್ರಭಾಕರ ಮಯ್ಯ, ಕಾರ್ಯದರ್ಶಿ ಎಂ, ರಾಮದೇವ ಐತಾಳ್, ಉಪನ್ಯಾಸಕ ಸಂಜೀವ ಜಿ, ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ ಇದ್ದರು.
Leave a Reply