
ಕೋಟ: ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಹಾಗೂ ತಾಯಂದಿರ ಜಂಟಿ ಸಭೆ ಹಾಗೂ ಸಮವಸ್ತç ವಿತರಣಾ ಸಮಾರಂಭ ಶುಕ್ರವಾರ ನಡೆಯಿತು.
ಸಮವಸ್ತ್ರವನ್ನು ಉಚಿತವಾಗಿ ಕೋಟ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಸುಬ್ರಾಯ ಆಚಾರ್ ವಿತರಿಸಿ ಮಾತನಾಡಿ ಕೋಟ ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಇದ್ದು ಯೋಗ ,ಯಕ್ಷಗಾನ, ಆಟೋಟಗಳಂತಹ ಹೆಚ್ಚಿನ ಚಟುವಟಿಕೆಯನ್ನು ಇಲ್ಲಿ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಅಧ್ಯಕ್ಷತೆ ವಹಿದ್ದರು. ಮಹಿಳಾ ಮತ್ತು ಶಿಶು ಅಭವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮಿ ಮಾತನಾಡಿ ಇಂತಹ ಅಂಗನವಾಡಿ ಕೇಂದ್ರಗಳು ಬೇರೆಯವರಿಗೆ ಮಾದರಿ ಎಂದು ಹೇಳಿದರು. ಈ ಸಂದರ್ಭ ಸಮವಸ್ತ್ರ ನೀಡಿದ ಸುಬ್ರಾಯ ಆಚಾರ್ ಇವರನ್ನು ಪಂಚಾಯತ್ ಹಾಗೂ ಅಂಗನವಾಡಿ ಪರವಾಗಿ ಗೌರವಿಸಲಾಯಿತು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ಶಿಲ್ಪ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಸದಸ್ಯರು, ಸಮಿತಿಯ ಮಾಜಿ ಅಧ್ಯಕ್ಷೆ ವನಜ ಸುರೇಶ್, ಮಕ್ಕಳ ಪೋಷಕರು ಊರಿನವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕಿ ಶೈಲಜ ಸಹಕರಿಸಿದರು.
ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತçವನ್ನು ಉಚಿತವಾಗಿ ಕೋಟ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಸುಬ್ರಾಯ ಆಚಾರ್ ವಿತರಿಸಿದರು. ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಮಹಿಳಾ ಮತ್ತು ಶಿಶು ಅಭವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶಿಲ್ಪ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
Leave a Reply