
ಕೋಟ ಸಹಕಾರಿ ವ್ಯವಸಾಯಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿ 2023-24 ನೀಡಿದ ಹಿನ್ನಲೆಯಲ್ಲಿ ಆ.30.ರಂದು ಮಂಗಳೂರಿನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನಿಸಿದೆ.
ಪ್ರಶಸ್ತಿಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ| ಕೃಷ್ಣ ಕಾಂಚನ್ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಇವರಿಗೆ ಬ್ಯಾಂಕಿನ ಪರವಾಗಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ ಹಂದೆ, ನಿಕಟಪೂರ್ವ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮತ್ತು ಮಾಜಿ ನಿರ್ದೇಶಕರಾದ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.
Leave a Reply