Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಂಚವರ್ಣದಿಂದ ಶಿಕ್ಷಕರ ದಿನಾಚರಣೆ,ಗುರುವಂದನೆ
ಜಿ.ರಾಮಚಂದ್ರ ಐತಾಳರು ಶಿಕ್ಷಕರಾಗಿ, ಸಾಮಾಜಿಕ ಕ್ಷೇತ್ರದಲ್ಲಿ ಮುಂಚೂಣಿಯ ಸೇವೆ – ರಾಜಶೇಖರ್ ಹೆಬ್ಬಾರ್

ಕೋಟ: ಗುರುವಿನ ಸ್ಥಾನ ಶ್ರೇಷ್ಠವಾದದ್ದು ಆದರೆ ಅದನ್ನು ಅರಿತು ಗೌರವಿಸಿ ನಡೆಯುವುದೇ ಅವರಿಗೆ ಸಲ್ಲಿಸುವ ಗುರುವಂದನೆಯಾಗಿದೆ ಎಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ಸ್ನೇಹಕೂಟ ದಶಮ ಸಂಭ್ರಮದ ಅಂಗವಾಗಿ ಶಿಕ್ಷಕ ದಿನಾಚರಣೆ ಪ್ರಯುಕ್ತ ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂನದನಾ ನುಡಿಗಳನ್ನಾಡಿ ಗುಂಡ್ಮಿರಾಮಚoದ್ರ ಐತಾಳರ ವ್ಯಕ್ತಿತ್ವ ವಿಶಿಷ್ಟವಾಗಿದ್ದು ಬಹು ಕ್ಷೇತ್ರದಲ್ಲಿ ಗುರುತಿಸಿಕೊಂಡು ನಿವೃತ್ತಿಯ ದಿನಗಳಲ್ಲೂ ಈ ಸಮಾಜಕ್ಕೆ ತನ್ನ ಸೇವೆಯನ್ನು ಧಾರೆ ಎರೆದಿದ್ದಾರೆ.

ಅವರ ಶೈಕ್ಷಣಿಕ ದಿನಗಳನ್ನು ವಿದ್ಯಾರ್ಥಿಗಳೊಂದಿಗಿನ ಬಾಂಧವ್ಯ ವಿದ್ಯಾರ್ಥಿಗಳ ಜೀವನಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟಿದೆ ಎಂದರಲ್ಲದೆ ಪಂಚವರ್ಣ ಸಂಘಟನೆಯ ಗುರುವಂದನೆ ಐತಾಳರಿಗೆ ಇನ್ನಷ್ಟು ಸೇವಾಕಾರ್ಯ ಕೈಗೊಳ್ಳಲು ಸಹಕಾರಿಯಾಗಿದೆ ಎಂದರು. ಇದೇ ವೇಳೆ ನಿವೃತ್ತ ಮುಖ್ಯ ಶಿಕ್ಷಕ ಜಿ.ರಾಮಚಂದ್ರ ಐತಾಳ್‌ರಿಗೆ ಸಂಘಟನೆ ಹಾಗೂ ಅವರ ಅಭಿಮಾನಿಗಳು ಗುರುವಂದನೆ ಸಲ್ಲಿಸಿಕೊಂಡು ಗೌರವಿಸಿದರು.

ಜಪಾನ್ ಮಿಯಾಸಾಕಿ ವಿಶ್ವವಿದ್ಯಾಲಯ ಪ್ರೊಫೆಸರ್ ಹರೀಶ್ ಕುಮಾರ್ ಮಧ್ಯಸ್ಥ ಗುರುವಂದನಾ ಕಾರ್ಯಕ್ರಮ ಸಮರ್ಪಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ  ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಹಂದಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಪೂರ್ಣಿಮಾ ಅಧಿಕಾರಿ, ಸ್ನೇಹಕೂಟ ಸಂಚಾಲಕಿ ಭಾರತಿ ವಿ ಮಯ್ಯ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಮಹಿಳಾಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,
ಜ್ಯೋತಿ ಉದಯ್ ಕುಮಾರ್ ,ನರೇಂದ್ರ ಕುಮಾರ್ ಕೋಟ ಇದ್ದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು.ಸ್ನೇಹಕೂಟದ ಗಾಯಿತ್ರಿ ಹೊಳ್ಳ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸ್ನೇಹಕೂಟದ ಸುವರ್ಣಲತಾ ಟೀಚರ್ ವಂದಿಸಿದರು. ಕಾರ್ಯಕ್ರಮವನ್ನು ಪಂಚವರ್ಣದ ರವೀಂದ್ರ ಕೋಟ ಸಂಯೋಜಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ಸ್ನೇಹಕೂಟ ದಶಮ ಸಂಭ್ರಮದ ಅಂಗವಾಗಿ ಶಿಕ್ಷಕ ದಿನಾಚರಣೆ ಪ್ರಯುಕ್ತ ನಿವೃತ್ತ ಮುಖ್ಯ ಶಿಕ್ಷಕ ಜಿ.ರಾಮಚಂದ್ರ ಐತಾಳ್ ಗುರುವಂದನೆ ಸ್ವೀಕರಿಸಿದರು. ಜಪಾನ್ ಮಿಯಾಸಾಕಿ ವಿಶ್ವವಿದ್ಯಾಲಯ ಪ್ರೊಫೆಸರ್ ಹರೀಶ್ ಕುಮಾರ್ ಮಧ್ಯಸ್ಥ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಹಂದಾಡಿ ಗ್ರಾಮಪಂಚಾಯತ್ ಕಾರ್ಯದರ್ಶಿ ಪೂರ್ಣಿಮಾ ಅಧಿಕಾರಿ ಇದ್ದರು.

Leave a Reply

Your email address will not be published. Required fields are marked *