Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

“ಒಂದೇ ಜಾತಿ.. ಒಂದೇ ಮತ.. ಒಬ್ಬರೇ ದೇವರು..” ವಿಶ್ವಗುರುವಿನ ಸಾರ್ವಕಾಲಿಕ ಸತ್ಯ ಸಂದೇಶದ ಜಾಗೃತಿಗಾಗಿ ಗುರು ಸಂದೇಶ ಸಾಮರಸ್ಯ ಜಾಥ

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ರಾಂತಿಯ ಹರಿಕಾರ. ಸಮಾಜ ಸುಧಾರಣೆಯ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರುಗಳು ಸಾರಿದ ಸಂದೇಶವನ್ನು ಜನಸಾಮಾನ್ಯರಿಗೆ ತಿಳಿಸಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಉಡುಪಿ ಜಿಲ್ಲಾ ಯುವ ವೇದಿಕೆಯ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಿಲ್ಲವ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ  ದಿನಾಂಕ 21-09-2025 ನೇ ಆದಿತ್ಯವಾರ ಸಮಯ ಮಧ್ಯಾಹ್ನ 2:00 ಗಂಟೆಗೆ ಗುರು ಸಂದೇಶ ಸಾಮರಸ್ಯ ಜಾಥವನ್ನು ಹಮ್ಮಿಕೊಂಡಿದ್ದು. ಗುರು ಸಂದೇಶ ಸಾಮರಸ್ಯ ಜಾಥವು ಬನ್ನಂಜೆ ಬಿಲ್ಲವರ ಸೇವಾ ಸಂಘ,  ನಾರಾಯಣ ಗುರು ಮಂದಿರದಲ್ಲಿ, ಗುರು ಪೂಜೆಯೊಂದಿಗೆ ಪ್ರಾರಂಭಗೊಂಡು. “ನಮ್ಮ ಸಮಾಜದ ಹೆಮ್ಮೆಯ ಕಣ್ಮಣಿ, ದಕ್ಷ ಮಹಿಳಾ ಪೊಲೀಸ್ ಅಧಿಕಾರಿ ಶ್ರೀಮತಿ ರೀನಾ ಸುವರ್ಣ ಮತ್ತು ಕರಾವಳಿಯ ನಿಷ್ಠೆಯ ದೈವಾರಾಧಕರಾದ ದೈವ ನರ್ತಕ ಶ್ರೀ ರವಿ ಪಡ್ಡಂ ರವರು ಗುರು ಸಂದೇಶ ಸಾಮರಸ್ಯ ರಥಕ್ಕೆ ಚಾಲನೆ” ನೀಡಲಿದ್ದಾರೆ.

ಗುರು ಸಂದೇಶ ಸಾಮರಸ್ಯ ಜಾಥದ ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರು ಮಾನ್ಯ ಶಾಸಕರು, ರಾಜಕೀಯ ನಾಯಕರುಗಳು, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಉಡುಪಿ ಪರಿಸರದ ಎಲ್ಲಾ ಬಿಲ್ಲವ ಸಂಘ ಸಂಸ್ಥೆಗಳ ಅಧ್ಯಕ್ಷರುಗಳ ಉಪಸ್ಥಿತಿಯಲ್ಲಿ ನಡೆಯಲಿದೆ ಈ ಸೌಹಾರ್ದ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಬಾಂಧವರು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ನಾರಾಯಣ ಗುರುಗಳ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರು ಸಂದೇಶ ಸಾಮರಸ್ಯ ಜಾಥವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತೇನೆ ಪ್ರವೀಣ್ ಎಮ್. ಪೂಜಾರಿ
ಜಿಲ್ಲಾಧ್ಯಕ್ಷರು, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಉಡುಪಿ.

Leave a Reply

Your email address will not be published. Required fields are marked *