
ಕೋಟ: ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆಯ ವತಿಯಿಂದ 73ನೇ ಆನಂದ ಸೃಷ್ಟಿ ಕಾರ್ಯಕ್ರಮದ ಅಂಗವಾಗಿ ಮತ್ತು ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಜಂಟಿ ಆಯೋಜನೆಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಮಾತನಾಡಿ ನಮ್ಮ ಸಂಸ್ಥೆಯ ಆನಂದ ಸೃಷ್ಟಿ ಕಾರ್ಯಕ್ರಮ ಮತ್ತು ಕಾಲೇಜಿನ ಜಂಟಿ ಆಯೋಜನೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಮಾದರಿ ಕಾರ್ಯಕ್ರಮ ಇಂತಹ ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಜೊತೆ ಜೊತೆಗೆ ಕಸಗಳನ್ನು ಬಿಸಾಡದಂತೆ ಅರಿವು ಮೂಡಿಸುವ ಕೆಲಸಗಳು ನಡೆಯಬೇಕು ಮತ್ತು ಶಿಬಿರಾರ್ಥಿಗಳ ಮನೆ ಭೇಟಿಯ ಸಮಯದಲ್ಲಿ ಇದರ ಅರಿವು ಮೂಡಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ ಮಾತನಾಡಿ ಇಂದಿನ ದಿನ ಮಾನದಲ್ಲಿ ಯುವ ಜನಾಂಗ ಇಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾದ್ಯ ಎಂದರು.
ಕಾರ್ಯಕ್ರಮದಲ್ಲಿ ಜನತಾ ಸಂಸ್ಥೆಯ ಎ.ಜಿ.ಎಮ್ ಶ್ರೀನಿವಾಸ್ ವ್ಯವಸ್ಥಾಪಕರಾದ ಮಿಥುನ್ ಕುಮಾರ್, ಗೀತಾನಂದ ಫೌಂಡೇಶನ್ ಸಂಯೋಜಕರಾದ ರವಿಕಿರಣ್, ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ ಮತ್ತು ಎನ್.ಎಸ್.ಎಸ್ ಯೋಜನಧಿಕಾರಿ ಸಂತೋಷ್ ನಾಯಕ್, ಆನಂದ ಸೃಷ್ಟಿ ತಂಡದ ಸದಸ್ಯರು ಶಿಬಿರರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆಯ ವತಿಯಿಂದ 73ನೇ ಆನಂದ ಸೃಷ್ಟಿ ಕಾರ್ಯಕ್ರಮದ ಅಂಗವಾಗಿ ಮತ್ತು ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಜಂಟಿ ಆಯೋಜನೆಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
Leave a Reply