
ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್ ,ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟ ಗ್ರಾಮ ಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಸಂಯೋಜನೆಯೊoದಿಗೆ 274ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಕೋಟ ರಾಷ್ಟ್ರೀಯ ಹೆದ್ದಾರಿ ಹರ್ತಟ್ಟು ಭಾಗವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಕಾರ್ಯಕ್ರಮ ಜರಗಿತು.
ಸುಮಾರು ಒಂದು ಕಿಮೀ ಹೈವೇ ಎಂಬಾಕ್ ಮೆಂಟ್ ಆಸುಪಾಸು ಸ್ವಚ್ಛಗೊಳಿಸಿ ಸುಮಾರು 20ಚೀಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ,ಎಸ್‌ಎಲ್‌ಆರ್‌ಎಂ ಘಟಕದ ಮುಖ್ಯಸ್ಥೆ ಭವ್ಯ ಸಹಕಾರ ನೀಡಿದರು.
ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್,ಉಪಾಧ್ಯಕ್ಷ ದಿನೇಶ್ ಆಚಾರ್, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ರವೀಂದ್ರ ಕೋಟ ಸಂಯೋಜಿಸಿದರು.
ಕೋಟದ ಪಂಚವರ್ಣದಿoದ 274ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟ ಹೆದ್ದಾರಿ ಕ್ಲಿನಿಂಗ್ ಕಾರ್ಯಕ್ರಮ ಜರಗಿತು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್,ಉಪಾಧ್ಯಕ್ಷ ದಿನೇಶ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇದ್ದರು.
Leave a Reply