Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ : ಆರೋಪಿ ಸೆರೆ…!!

ಕೋಟ: ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಕೋಟ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಆನಂದ (26) ಎಂದು ಗುರುತಿಸಲಾಗಿದೆ.

ಆರೋಪಿಯು ಕುಂದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಸುಮಾರು 18 ಗ್ರಾಂ ತೂಕದ ಅಂದಾಜು 1,45,000 ರೂ. ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿರುವುದಾಗಿ ಬಸವ ಪೂಜಾರಿ (72) ಎಂಬವರು ನೀಡಿದ ದೂರಿನಂತೆ ಕೋಟ ಪೋಲಿಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 176/2025 0 331(4), 305 2.2.2 ರಂತೆ ಪ್ರಕರಣ ದಾಖಲಾಗಿದೆ.

ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ ಕುಮಾ‌ರ್ ಆರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *