Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ.18ರ ವರೆಗೆ ರಜೆ ವಿಸ್ತರಣೆ..!!

ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ನಾಳೆಯಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೆಲವು ಕಡೆ ಪೂರ್ಣಗೊಂಡಿಲ್ಲ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಿಳಿಸಿದ್ದಾರೆ.

ಅಕ್ಟೋಬರ್ 7ರಂದು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಿದ್ದೇವು. ಆದರೆ, ನಿರೀಕ್ಷೆಯಂತೆ ರಾಜ್ಯದ ಹಲವೆಡೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ರಾಜ್ಯದಲ್ಲಿ 1.20 ಲಕ್ಷ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲು ದಸರಾ ರಜೆ ವಿಸ್ತರಣೆ ಮಾಡುವಂತೆ ರಾಜ್ಯ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಮನವಿ ಆಧಾರದ ಮೇಲೆ ರಜೆಯನ್ನು ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸಮೀಕ್ಷೆಯಲ್ಲಿ ಭಾಗವಹಿಸುವಂತಿಲ್ಲ. ರಜೆ ವಿಸ್ತರಣೆಯಿಂದ 12 ದಿನಗಳು ಸಿಗಲಿದ್ದು, ಅಕ್ಟೋಬರ್ 18ರೊಳಗೆ ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ಮುಗಿಸಬೇಕು. ಸಮೀಕ್ಷೆಯಲ್ಲಿ ತೊಡಗಿಸಿಕೊಂಡ ಶಿಕ್ಷಕರಿಗೆ 8 ವರ್ಕಿಂಗ್ ರಜೆ, ಇತರ ಸರ್ಕಾರಿ ರಜೆಗಳು ಸಿಗಲಿವೆ. ಸಮೀಕ್ಷೆ ಕಾರ್ಯಕ್ಕೆ ಹಿಂದೇಟು ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ

Leave a Reply

Your email address will not be published. Required fields are marked *