Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾಂಡೇಶ್ವರದಲ್ಲಿ ಪೋಷಣ್ ಅಭಿಯಾನ,ತಾಯಿ ಹೆಸರಿನಲ್ಲಿ ಗಿಡ ನೆಡಿ- ಹಾದಿಮನೆ

ಕೋಟ: ಸರಕಾರದ ಯೋಜನೆಯಾದ ಪೋಷಣ್ ಅಭಿಯಾನವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ತಾಯಿ ಹೆಸರಿನಲ್ಲಿ ಗಿಡನೆಟ್ಟು ಪರಿಸರಕ್ಕೆ ಪೂರಕವಾಗಿ ಆಚರಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ತಾಯಂದಿರರಿಗೆ ಕರೆ ನೀಡಿದರು.

ಪಾಂಡೇಶ್ವರ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ , ಜಿಲ್ಲಾಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖೆ ಉಡುಪಿ,ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಗ್ರಾಮಪಂಚಾಯತ್ ಪಾಂಡೇಶ್ವರ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ ಇವರುಗಳ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಹಾಗೂ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ಅಭಿಯಾನ ಮಹಿಳೆಯರಿಗೆ ಸೀಮಿತವಾಗದೆ ಪುರುಷರು ಇದರಲ್ಲಿ ಭಾಗಿಯಾಗಿ ಇಲ್ಲಿ ನೀಡುವ ಮಾಹಿತಿಗಳನ್ನು ಪಡೆದುಕೊಳ್ಳಬೇಕು ಎಂದರು.

ಸಭೆಯ ಅಧ್ಯಕ್ಷತೆಯನ್ನು ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ ವಹಿಸಿದ್ದರು. ಇದೇ ವೇಳೆ ಸೀಮಂತ ,ಅನ್ನ ಪ್ರಾಶನ ಕಾರ್ಯಕ್ರಮಗಳು ನಡೆಯಿತು.ವಿವಿಧ ತರಹದ ತರಕಾರಿಗಳು, ಪೋಷಣ್ ಮಾಸಾಚರಣೆಯ ಚಿತ್ರಗಳು ಗಮನ ಸೆಳೆಯಿತು.

ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ವೈ.ಬಿ ರಾಘವೇಂದ್ರ ಆಚಾರ್,ಸದಸ್ಯರಾದ ಸಂಧ್ಯಾ ರಾವ್, ಚಂದ್ರಮೋಹನ್, ಸoಜೀವಿನಿ ಒಕ್ಕೂಟದ ಅಧ್ಯಕ್ಷೆ ಲಿಲಾವತಿ ಗಂಗಾಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಪಾಂಡೇಶ್ವರ ಪಂಚಾಯತ್ ಪಿಡಿಒ ವಂದನಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಅಶ್ವಿನಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಇಲಾಖೆಯ ಹಿರಿಯ ಮೇಲ್ವಿಚಾರಕಿ ಭಾಗೀರಥಿ ಆಚಾರ್ಯ ಸ್ವಾಗತಿಸಿ ನಿರೂಪಿಸಿದರು.

ಪಾಂಡೇಶ್ವರ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ , ಜಿಲ್ಲಾಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಗ್ರಾಮ ಪಂಚಾಯತ್ ಪಾಂಡೇಶ್ವರ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ ಇವರುಗಳ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಹಾಗೂ ಅಭಿಯಾನದಲ್ಲಿ ಸೀಮಂತ ,ಅನ್ನ ಪ್ರಾಶನ ಕಾರ್ಯಕ್ರಮಗಳು ನಡೆಯಿತು. ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ಇದ್ದರು.

Leave a Reply

Your email address will not be published. Required fields are marked *