
ಕೋಟ: ಪ್ರಸ್ತುತ ದಿನಗಳಲ್ಲಿ ಮಾದಕ ವ್ಯಸನಕ್ಕೆ ತುತ್ತಾಗುವರ ಸಂಖ್ಯೆ ಹೆಚ್ಚುತ್ತಿದ್ದು ಇದರಿಂದ ಜಾಗೃತಗಾಗುವುದು ಅತ್ಯವಶ್ಯಕ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕರ ಕಛೇರಿ ಹೆಡ್ ಕಾನ್ ಸ್ಟೇಬಲ್ ಸಂತೋಷ್ ಕುಮಾರ್ ಹೇಳಿದರು.
ಶನಿವಾರ ಕೋಟದ ಪಡುಕರೆಯ ಸರಕಾರಿ ಪದವಿ ಪೂರ್ವಕಾಲೇಜಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಕೋಟದ ಪಡುಕರೆಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಹಯೋಗದೊಂದಿಗೆ ಮಾದಕ ವ್ಯಸನ ಮುಕ್ತ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಯುವ ಸಮೂಹ ದುಶ್ಚಟಕ್ಕೆ ಬಲಿಯಾಗದಂತೆ ಜಾಗೃತಿ ವಹಿಸಬೇಕು ಒಮ್ಮೆ ಅದಕ್ಕೆ ಬಲಿಯಾದರೆ ಅದರಿಂದ ಹೊರಬರಲು ಸಾಧ್ಯವಿಲ ನಮ್ಮ ಅಮೂಲ್ಯವಾದ ಜೀವನವನ್ನು ಹಾಳುಗೆಡದಂತೆ ನೋಡಿಕೊಳ್ಳಬೇಕು ಸಮಾಜದಲ್ಲಿ ಒಳ್ಳೆಯ ಉದ್ದೇಶದಿಂದ ಬದುಕಿ ಇನ್ನೊಬ್ವರಿಗೆ ಪ್ರೇರಣೆಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿ , ಮೊಬೈಲ್ ಗೀಳಿಂದ ಹೊರಬನ್ನಿ, ಪ್ರಸ್ತುತ ಮೊಬೈಲ್ ಹ್ಯಾಕ್ ಪ್ರಸಂಗಗಳು ಅತಿಯಾಗಿ ವಿಜೃಂಭಿಸುತ್ತಿದ್ದು ಇದರ ಬಗ್ಗೆ ಜಾಗೃತಿ ವಹಿಸಿ ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಕೋಟ ಕರ್ಣಾಟಕ ಬ್ಯಾಂಕ್ ಪ್ರಭಂಧಕ ಗುರುರಾಜ್ ಸರಳಾಯ ಉದ್ಘಾಟಿಸಿದರು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅಭ್ಯಾಗತರಾಗಿ ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಹಿಳಾ ಮತ್ತು ಮಕ್ಕಳ ಹೋರಾಟಗಾರ್ತಿ ತಿಲೋತ್ತಮೆ ನಾಯಕ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಿ ಸ್ವಾಗತಿಸಿದರು. ಪಂಚವರ್ಣದ ರವೀಂದ್ರ ಕೋಟ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿ ದಿಗಂತ್ ವಂದಿಸಿದರು.
ಪoಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಕೋಟದ ಪಡುಕರೆಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಹಯೋಗದೊಂದಿಗೆ ಮಾದಕ ವ್ಯಸನ ಮುಕ್ತ ಕಾರ್ಯಾಗಾರ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಕೋಟ ಕರ್ಣಾಟಕ ಬ್ಯಾಂಕ್ ಪ್ರಭಂಧಕ ಗುರುರಾಜ್ ಸರಳಾಯ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕರ ಕಛೇರಿ ಹೆಡ್ ಕಾನ್ ಸ್ಟೇಬಲ್ ಸಂತೋಷ್ ಕುಮಾರ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಇದ್ದರು.
Leave a Reply