
ಕೋಟ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಕೋಟೇಶ್ವರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗು 2ರ ಒಂದು ದಿನದ ಶಿಬಿರ ಕಾರ್ಯಕ್ರಮ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ್ದುಸುಮಾರು 100 ವಿದ್ಯಾರ್ಥಿ ಸ್ವಯಂ ಸೇವಕ ಸೇವಕೀಯರು ದೇವಸ್ಥಾನದ ಆವರಣ ಹಾಗೂ ದೇವಸ್ಥಾನದ ಕೆರೆಯ ಕಟ್ಟೆಗಳನ್ನು ಸ್ವಚ್ಛಗೊಳಿಸಿದರು. ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ನಿರಂಜನ್ ಶರ್ಮ, ವಾಣಿಜ್ಯ ಶಾಸ್ತç ವಿಭಾಗ ಸಹಾಯಕ ಪ್ರಾಧ್ಯಾಪಕಿಯಾದ ಶ್ರೀಮತಿ ವಿದ್ಯಾ ಹಾಗೂ ಭೌತಶಾಸ್ತ್ರ ವಿಷಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ರಂಜಿತ್ ಇವರು ಶಿಬಿರದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. ಇದೇ ಸಂದರ್ಭದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಸದಿರುವಂತೆ ಜಾಗೃತಿ ಮೂಡಿಸುವ ಸಲುವಾಗಿ ಜಾತ ನಡೆಸಲಾಯಿತು.













Leave a Reply