
ಆದಿವುಡುಪಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಂಗ್ಲಮಾಧ್ಯಮ ಶಾಲೆಗಳಲ್ಲಿ ಜಂಟಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಶಿಕ್ಷಣ ಸಮಿತಿಯ ಜಂಟಿ ಕಾರ್ಯದರ್ಶ ಟಿ. ಕೆ. ಗುರುರಾಜ್ ರಾವ್ ಅವರು ದೀಪ ಬೆಳಗಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ, ಸಾಹಿತಿ ವೀರಣ್ಣ ಕುರುವತ್ತಿಗೌಡ ಅವರು ಕನ್ನಡ ರಾಜ್ಯೋತ್ಸವ ಆಚರಿಸುವ ಉದ್ದೇಶವನ್ನು ವಿವರಿಸಿದರು.
ಶಿಕ್ಷಕಿ ಅಕ್ಷತಾ ಶೆಟ್ಟಿ, ವಿದ್ಯಾರ್ಥಿಗಳಾದ ಶ್ರೀನಿಧಿ ಭಟ್, ಪಲ್ಲವಿ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.
ಕನ್ನಡ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಭಾಗ್ಯಶ್ರೀ ಸ್ವಾಗತಿಸಿ, ಆಂಗ್ಲಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಕೆ. ವಂದಿಸಿದರು. ಆಂಗ್ಲಮಾಧ್ಯಮ ಶಾಲಾ ಶಿಕ್ಷಕ ಸುಮಂತ್ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಆಂಗ್ಲಮಾಧ್ಯಮ ಪೂರ್ವಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಜಯಲಕ್ಷ್ಮಿ ಶೆಟ್ಟಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯಶಿಕ್ಷಕಿ ಮಧು ಜಿ. ರಾವ್, ಸಮೂಹ ನೃತ್ಯ ತರಬೇತಿ ನೀಡಿದ ಕಾತ್ಯಾಯಿನಿ ವಿ. ರಾವ್ ಹಾಗೂ ಎಲ್ಲಾ ಶಿಕ್ಷಕಿಯರು ಉಪಸ್ಥಿತರಿದ್ದರು.













Leave a Reply