
ಕೋಟ: ಕಾಂಗ್ರೆಸ್ನ ಹಿರಿಯ ಮುಂದಾಳು, ರೋಟರಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಡಾ. ಅಭಿಷೇಕ್ ಮನು ಸಿಂಘ್ವಿ ಯವರ ಆದೇಶದ ಮೇರೆಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಶಿಫಾರಸಿನೊಂದಿಗೆ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಸಿ. ಎಂ. ಧನಂಜಯ ಅವರು ನೇಮಕಾತಿ ಮಾಡಿ ಆದೇಶ ನೀಡಿದ್ದಾರೆ.












Leave a Reply