
ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಅಭಿಯಾನದ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ದೇಶ ವ್ಯಾಪ್ತಿ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸಹ್ಯಾದ್ರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಿ ಹಾಕಿರುವ ಬಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಮತ್ತು ಇದರಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಯವರ ಮೇಲೆ ಆರೋಪ ಮಾಡಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವಾಗಿದೆ.
ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ದೇಶದ ಭವಿಷ್ಯವಾಗಿರುವ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವ ಒಂದು ಸಂಸ್ಥೆ. ಇಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಪ್ರಬುದ್ಧತೆ ಹೊಂದಿರುವ, ರಾಜಕೀಯ ಪ್ರಜ್ಞೆ ಇರುವ, ಹದಿನೆಂಟು ವರ್ಷ ತುಂಬಿ ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಹೊಂದಿರುವವರಾಗಿದ್ದಾರೆ. ಇವರಿಗೆ ಸಹಿ ಹಾಕುವ ಮೊದಲು ಯಾವುದು ಸರಿ, ಯಾವುದು ತಪ್ಪು ಎಂದು ಆಲೋಚನೆ ಮಾಡುವ ಶಕ್ತಿಯನ್ನು ಹೊಂದಿದವರಾಗಿದ್ದಾರೆ.
ಬಿಜೆಪಿ ಯುವ ಮೋರ್ಚಾದವರು ದೇಶದ ಇತಿಹಾಸ ತಿಳಿದು ಮಾತನಾಡುವುದು ಉತ್ತಮ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ದೇಶದ ಹೆಚ್ಚಿನ ಹೋರಾಟ, ಚಳುವಳಿಗಳಲ್ಲಿ ಪ್ರಮುಖ ಪಾತ್ರವಹಿಸಿದ ಸಂಘಟನೆಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಮುಂಚೂಣಿಯಲ್ಲಿ ಬರುತ್ತವೆ. ಇವತ್ತು ಚುನಾವಣಾ ಆಯೋಗ ಒಂದು ಸ್ವಾಯತ್ತ ಸಂಸ್ಥೆಯಾದರೂ ಕೂಡ ಅದು ಕರ್ತವ್ಯ ನಿರ್ವಹಿಸುತ್ತಿರುವುದು ಅಂಬೇಡ್ಕರ್ ಕೊಟ್ಟ ಸಂವಿಧಾನದ ಅಡಿಯಲ್ಲಿ ಹಾಗೂ ಇದರ ತಪ್ಪುಗಳನ್ನು ಟೀಕಿಸುವ ಅಧಿಕಾರ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೆ ಇದೆ.
ಇವತ್ತು ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡರೆ, ಸಹಿ ಮಾಡಿದರೆ ಅದು ತಪ್ಪಲ್ಲಾ ಎನ್ನುವ ಸಾಮಾನ್ಯ ಜ್ಞಾನವನ್ನು ಬಿಜೆಪಿ ಯುವ ಮೋರ್ಚಾ ಹೊಂದುವುದು ಉತ್ತಮ. ಇನ್ನು ಮಂಜುನಾಥ್ ಭಂಡಾರಿಯಂತಹ ಪ್ರಬುದ್ಧ ರಾಜಕಾರಣಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಟೀಕೆ ಮಾಡುತ್ತಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವನ್ನು ಏತ್ತಿ ತೋರಿಸುತ್ತಿದೆ.
ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ಜಾತಿ, ಧರ್ಮ, ಮತ, ಪಕ್ಷ, ಭಾಷೆ ಎಲ್ಲವನ್ನೂ ಮೀರಿ ಸರ್ವರಿಗೂ ವಿದ್ಯಾಧಾನ ಮಾಡುವ ದಕ್ಷಿಣ ಕನ್ನಡ ಮಾತ್ರವಲ್ಲಾ ನಮ್ಮ ರಾಜ್ಯದ ಒಂದು ಹೆಮ್ಮೆಯ ಸಂಸ್ಥೆ ಇಂತಾ ಸಂಸ್ಥೆಯ ವಿರುದ್ಧ ತಮ್ಮ ರಾಜಕೀಯ ಬೇಳೆ ಬೇಯಿಸಿ ಕೊಳ್ಳುವುದನ್ನು ಬಿಜೆಪಿ ಯುವ ಮೋರ್ಚಾ ಇನ್ನಾದರೂ ನಿಲ್ಲಿಸಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗೃಹ ಮಾಡಿದ್ದಾರೆ.












Leave a Reply