ಕೋಟ: ಕೋಟ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಇದೇ ಡಿ.14ರಂದು ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ 10.30ಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿ, ಉಡುಪಿ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯಾ ಶೆಟ್ಟಿ ಒತ್ತಡ ನಿರ್ವಹಣೆಯೊಂದಿಗೆ ಯಶಸ್ಸಿನ ಹೆಜ್ಜೆಯತ್ತ ಮಹಿಳೆ ವಿಷಯದ ಬಗ್ಗೆ ಮಾತನಾಡುವರು.
ಕೋಟ ಅಮೃತೇಶ್ವರಿ ದೇವಸ್ಥಾನದ ಅಧ್ಯಕ್ಷ ಆನಂದ ಸಿ. ಕುಂದರ್,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ನಾಗರಾಜ ಶೆಟ್ಟಿ, ತಾಲ್ಲೂಕು ಯೋಜನಾಧಿಕಾರಿ ರಮೇಶ ಪಿ.ಕೆ. ಭಾಗವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.














Leave a Reply