Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ

ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಬೆಂಗಳೂರು. ಇವರು ಪ್ರತಿ ವರ್ಷ ಕೊಡಮಾಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ (2025ನೇ ಸಾಲು) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ.

ರೈತ&ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನಾಂಕ 19-12-2025 ರ ಶುಕ್ರವಾರ ಬೆಳಗ್ಗೆ 11.15ಗಂಟೆಗೆ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ದೂರದರ್ಶನ ಕಾರ್ಯಕ್ರಮ ಮುಖ್ಯಸ್ಥರಾದ ಎಚ್.ಎನ್.ಆರತಿ, ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಆರ್.ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಸಿಸಿರಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *