Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟತಟ್ಟು- ಸರಕಾರದ ಮನೆ ಮನೆಗೆ ಗಂಗೆ ಯೋಜನೆ ಯಕ್ಷಗಾನ ಪ್ರದರ್ಶನದ ಮೂಲಕ ಜಾಗೃತಿ

ಕೋಟ: ಕೋಟತಟ್ಟ ಗ್ರಾಮ ಪಂಚಾಯತ್ ಸಾರಥ್ಯದಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಡುಪಿ, ಪುಣ್ಯಕೋಟಿ ಅನುಷ್ಠಾನ ಬೆಂಬಲ ಸಂಸ್ಥೆ, ಜಲಜೀವನ ಮಿಷನ್ ಯೋಜನೆಯಡಿ ಶಶಿಚಂದ್ರ ಯಕ್ಷಗಾನ ಬಳಗ ಉಡುಪಿ ಇವರ ಸಹಯೋಗದಲ್ಲಿ ಮನೆ ಮನೆಗೆ ಗಂಗೆ ಎನ್ನುವ ಯಕ್ಷಗಾನ ಪ್ರದರ್ಶನವನ್ನು ಜು.20 ಗುರುವಾರ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬ್ರಹ್ಮಾವರ ತಾಲೂಕು ಪಂಚಾಯತ್‍ನ ಕಾರ್ಯನಿರ್ವಹಣಾಧಿಕಾರಿ ಎಚ್. ವಿ .ಇಬ್ರಾಹಿಂಪುರ ಚಂಡೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಾಸು ಪೂಜಾರಿ, ಸದಸ್ಯರಾದ ಕೆ.ಸತೀಶ್ ಕುಂದರ್, ಪುಣ್ಯಕೋಟಿ ಅನುಷ್ಠಾನ ಬೆಂಬಲ ಸಂಸ್ಥೆ ಜೆಜೆಎಂ ತಂಡದ ನಾಯಕರಾದ ಗಿರೀಶ್ ಟಿ.ವಿ ಹಾಗೂ ತಂಡದವರು, ಜಿಲ್ಲಾ ಪಂಚಾಯತ್‍ನ ಸುಧೀರ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವೇಕ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರವೀಂದ್ರ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು. ಹಾಗೂ ವಿವೇಕ ಬಾಲಕರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ವೆಂಕಟೇಶ್ ಉಡುಪ ವಂದಿಸಿದರು.

ಕೋಟತಟ್ಟ ಗ್ರಾಮ ಪಂಚಾಯತ್ ಸಾರಥ್ಯದಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಡುಪಿ, ಪುಣ್ಯಕೋಟಿ ಅನುಷ್ಠಾನ ಬೆಂಬಲ ಸಂಸ್ಥೆ, ಜಲಜೀವನ ಮಿಷನ್ ಯೋಜನೆಯಡಿ ಶಶಿಚಂದ್ರ ಯಕ್ಷಗಾನ ಬಳಗ ಉಡುಪಿ ಇವರ ಸಹಯೋಗದಲ್ಲಿ ಮನೆಗೆ ಗಂಗೆ ಎನ್ನುವ ಯಕ್ಷಗಾನ ಪ್ರದರ್ಶನವನ್ನು ಬ್ರಹ್ಮಾವರ ತಾಲೂಕು ಪಂಚಾಯತ್‍ನ ಕಾರ್ಯನಿರ್ವಹಣಾಧಿಕಾರಿ ಎಚ್. ವಿ .ಇಬ್ರಾಹಿಂಪುರ ಚಂಡೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Leave a Reply

Your email address will not be published. Required fields are marked *