Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ಕಾರ್ಯಾಗಾರ

ಕೋಟ: ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಪರೀಕ್ಷೆ ಎದುರಿಸುವುದು ಹೇಗೆ? ಪರೀಕ್ಷಾ ಭಯ ನಿವಾರಣೋಪಾಯದ ಕುರಿತಾಗಿ ಮಾಹಿತಿ ಕಾರ್ಯಕ್ರಮ ಇತ್ತೀಚಿಗೆ ಕಾಲೇಜಿನ ವಿಜ್ಞಾನ ಸಂಘ ‘ವಿಶನ್’ ಇದರ ವತಿಯಿಂದ ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ನಿರ್ದೇಶಕ ಡಾ., ಸಿ ಪ್ರಕಾಶ್ ತೋಳಾರ್ ಮಾತನಾಡಿ ವಿದ್ಯಾರ್ಥಿಗಳು ತರಗತಿಯಲ್ಲಿ ಏಕಾಗ್ರತೆಯಿಂದ ಪಾಠವನ್ನು ಕೇಳಬೇಕು. ಮನೆಗೆ ತೆರಳಿದ ನಂತರ ಅಂದು ಮಾಡಿದ ಪಾಠಗಳನ್ನು ಅಂದೇ ಓದಿ ತಿಳಿದುಕೊಳ್ಳಬೇಕು. ಹಾಗೆಯೇ ಓದಿದ ಪಾಠಗಳನ್ನು ಮನನ ಮಾಡಿಕೊಳ್ಳುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಮನಸ್ಸಿನಲ್ಲಿ ಯಾವುದೇ ಭಯವಿಲ್ಲದೇ ಪರೀಕ್ಷೆಯನ್ನು ಎದುರಿಸುತ್ತೇನೆ ಎಂಬ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಕಡಿಮೆ ಅಂಕ ಬಂದಲ್ಲಿ ಕುಗ್ಗದೇ ಮುಂದೆ ಸಾಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕೆಂಬುದನ್ನು ತಿಳಿಸುತ್ತಾ ವಿವಿಧ ರೀತಿಯ ಓದುವ ಮನದಟ್ಟು ಮಾಡಿಕೊಳ್ಳುವ ಬಗೆಯನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ವಿದ್ಯಾರ್ಥಿನಿ ಕುಮಾರಿ ಪ್ರತಿಜ್ಞಾ ಪ್ರಾರ್ಥಿಸಿದರು. ಕುಮಾರಿ ಎಚ್. ಸಹನಾ ಕಾಮತ್ ವಂದಿಸಿದರು. ವಿಜ್ಞಾನ ಸಂಘದ ಸಂಯೋಜಕರಾದ ರವಿ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಪರೀಕ್ಷೆ ಎದುರಿಸುವುದು ಹೇಗೆ? ಪರೀಕ್ಷಾ ಭಯ ನಿವಾರಣೋಪಾಯದ ಕುರಿತಾಗಿ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ನಿರ್ದೇಶಕ ಡಾ., ಸಿ ಪ್ರಕಾಶ್ ತೋಳಾರ್ ಮಾತನಾಡಿದರು.

Leave a Reply

Your email address will not be published. Required fields are marked *