
ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ ಇದರ ಆಶ್ರಯದಲ್ಲಿ ಉಜ್ವಲ ಸಂಜೀವಿನಿ ಒಕ್ಕೂಟ, ಸ್ಥಳೀಯ ಸಂಘ ಸಂಸ್ಥೆಗಳು, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಅಂಬಲಪಾಡಿ ಬಂಕೇರಕಟ್ಟ ಪರಿಸರದ ಆಚಾರಿಗುಂಡಿಯಲ್ಲಿ ನಡೆದ ‘ಕೆಸರ್ದ ಗೊಬ್ಬು-2023’ ಗ್ರಾಮೀಣ ಕ್ರೀಡಾಕೂಟದಲ್ಲಿ ಉಡುಪಿಯ ನೂತನ ಶಾಸಕ ಯಶ್ಪಾಲ್ ಎ. ಸುವರ್ಣ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಪ್ರಭಾರ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಸ್ಥಳೀಯ ಕೃಷಿಕ ಪಠೇಲರ ಮನೆ ಶರತ್ ಶೆಟ್ಟಿ, ಸ್ವಾಮಿ ಫ್ರೆಂಡ್ಸ್ ತಂಡದ ವಿನೋದ್ ಪೂಜಾರಿ, ಪ್ರವೀಣ್ ಪೂಜಾರಿ, ಸಂದೇಶ್, ವಿಜಯರಾಜ್, ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸವಿತಾ ಸಂತೋಷ್, ಸದಸ್ಯರಾದ ವಾಣಿ ಪ್ರಭಾಕರ್, ರಂಜಿತಾ ಗುರುರಾಜ್ ಹಾಗೂ ಸ್ವಾಮಿ ಫ್ರೆಂಡ್ಸ್ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Leave a Reply