Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಂಚವರ್ಣ ರಜತ ಗೌರವಕ್ಕೆ ಗ್ರಾಮೀಣ ಭಾಷಾ ಸೊಗಡುಗಾರ ಎ.ಕೆ.ಶೆಟ್ಟಿ ನಡೂರು ಆಯ್ಕೆ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು, ಈ ಹಿನ್ನಲ್ಲೆಯಲ್ಲಿ ಈ ತಿಂಗಳು ಗ್ರಾಮೀಣ ಭಾಷಾ ಸೊಗಡುಗಾರ ಎ.ಕೆ ಶೆಟ್ಟಿ ನಡೂರು ಇವರನ್ನು ಇವರನ್ನು ಆಯ್ಕೆಗೊಳಿಸಲಾಗಿದೆ.

ಪಂಚವರ್ಣ ಸಂಸ್ಥೆ ನೀಡುತ್ತಿರುವ 10ನೇ ಸಾಧಕ ಶಕ್ತಿಯಾಗಿದ್ದು, ಈ ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಕ್ಷೇತ್ರದ ಸಾಧಕ ಜಿ. ತಿಮ್ಮ ಪೂಜಾರಿ, ಸಮಾಜಸೇವಕ ಈಶ್ವರ್ ಮಲ್ಪೆ, ಅನಾಥರ ಬದುಕಿನ ಆಶಾಕಿರಣ ಹೊಸಬೆಳಕು ವಿನಯಚಂದ್ರ ಸಾಸ್ತಾನ, ವಿಶೇಷಚೇತನ ಸಾಧಕಿ ಲಲಿತಾ ಪೂಜಾರಿ, ಸಾಲಿಗ್ರಾಮದ ಹಿರಿಯ ವೈದ್ಯರಾದ ಡಾ. ವಿಶ್ವೇಶ್ವರ ತುಂಗ, ಸಹಕಾರಿ ಕ್ಷೇತ್ರದ ಕೊರಗ ಪೂಜಾರಿ , ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಪಾರಂಪಳ್ಳಿ ಗಣೇಶ್ ಅಡಿಗ, ವೆರಿಕೋಸ್ ತಜ್ಞ ಡಾ.ಎಂ ವಿ ಉರಾಳ , ಕುಂದಗನ್ನಡದ ರಾಯಬಾರಿ ಮನು ಹಂದಾಡಿ ಇವರುಗಳನ್ನು ಗುರುತಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ.

ಇದೇ ಸೆ.10 ರಂದು ಅವರ ಅ ಸ್ವಗೃಹದಲ್ಲಿ ಈ ಗೌರವ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *