ಕೋಟ: ಕೋಟ ಸೇವಾ ಸಂಗಮ ಶಿಶುಮಂದಿರದಲ್ಲಿ, ಸೆ. 1ರಂದು ರಕ್ಷಾ ಬಂಧನ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಆಚರಿಸಲಾಯಿತು. ಶಿಶುಮಂದಿರದ ಆಡಳಿತ ಮಂಡಳಿಯ ಕಾರ್ಯಕರ್ತೆ ವಸುಧಾ ಪ್ರಭು ರಕ್ಷಾಬಂಧನದ ಮಹತ್ವವನ್ನು ತಿಳಿಸಿದರು. ಶಿಶುಮಂದಿರದ ಆಡಳಿತ ಮಂಡಳಿ ಅಧ್ಯಕ್ಷೆ ನಾಗಲಕ್ಷ್ಮಿ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ಸುಷ್ಮಾಹೊಳ್ಳ ಧನ್ಯವಾದ ಸಮರ್ಪಿಸಿದರು. ವ್ಯವಸ್ಥಾಪಕಿ ಭಾಗ್ಯ ವಾದಿರಾಜ್ ಕಾರ್ಯಕ್ರಮ ನಿರೂಪಿಸಿದರು.ಶ್ರೀ ವರಮಹಾಲಕ್ಷ್ಮಿ ಅಷ್ಟೊತ್ತರ ಶತನಾಮಾವಳಿ, ನಂತರ ಲಕ್ಷ್ಮೀ ಪೂಜೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕೋಟ ಸೇವಾ ಸಂಗಮ ಶಿಶುಮಂದಿರದಲ್ಲಿ, ಸೆ. 1ರಂದು ರಕ್ಷಾ ಬಂಧನ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಆಚರಿಸಲಾಯಿತು.














Leave a Reply