ಕೋಟ: ಕೋಟ ವಿವೇಕ ವಿದ್ಯಾಸಂಸ್ಥೆ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಹಾಗೂ ಬ್ರಹ್ಮಾವರ ತಾಲೂಕು ಮಟ್ಟದ ಪ.ಪೂ. ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೆ.12ರಂದು ವಿವೇಕ ಕ್ರೀಡಾಂಗಣದಲ್ಲಿ ಜರಗಿತು.
ವಿದ್ಯಾಸಂಘದ ಜತೆ ಕಾರ್ಯದರ್ಶಿ ಮಂಜುನಾಥ ಉಪಾಧ್ಯ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆ ಕೂಡ ಬದುಕಿನಲ್ಲಿ ಅತೀ ಮುಖ್ಯವಾಗುತ್ತದೆ. ವಿದ್ಯಾರ್ಥಿಗಳು ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದುವರಿದಾಗ ಯಶಸ್ಸು ಖಂಡಿತ ಎಂದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಮಾಧ್ಯಮದಲ್ಲೂ ಶಿಕ್ಷಣ ಪಡೆದರು ದೈರ್ಯ- ಆತ್ಮವಿಶ್ವಾಸವಿದ್ದಾಗ ಎಷ್ಟು ದೊಡ್ಡ ಸಾಧನೆಯನ್ನು ಬೇಕಾದರು ಮಾಡಬಹುದು. ಕ್ರೀಡೆ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದರು.
ಕೋಟ ಸಿಟಿ ರೋಟರಿ ಅಧ್ಯಕ್ಷ ವೆಂಕಟೇಶ್ ಆಚಾರ್ಯ, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ಪ.ಪೂ. ಕಾಲೇಜಿ ವಿಭಾಗದ ದೈ.ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಪ್ರೌಢಶಾಲೆ ವಿಭಾಗದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ತಾಲೂಕು ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ತಾಲೂಕು ಪರಿವೀಕ್ಷಣಾ„ ಕಾರಿ ಪದ್ಮಾವತಿ, ಪ್ರೌಢಶಾಲೆ ವಿಭಾಗದ ಜಿಲ್ಲಾ ಅಧೀಕ್ಷಕ ಗೋಪಾಲ ಶೆಟ್ಟಿ, ವಿವೇಕ ವಿದ್ಯಾಸಂಸ್ಥೆಯ ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕರಾದ ವೆಂಕಟೇಶ್ ಉಡುಪ, ಜಗದೀಶ್ ಹೊಳ್ಳ, ಭಾಸ್ಕರ್ ಆಚಾರ್ಯ, ನಿವೃತ್ತ ದೈ.ಶಿಕ್ಷಣ ನಿರ್ದೇಶಕ ವಸಂತ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಜಗದೀಶ್ ನಾವಡ ಸ್ವಾಗತಿಸಿ, ದೈ.ಶಿ.ಶಿಕ್ಷಕ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದೈ.ಶಿ.ಶಿಕ್ಷಕರಾದ ಮಮತಾ, ವಿಶ್ವನಾಥ ಕ್ರೀಡಾ ಕೂಟದ ಸಂಯೋಜನೆಗೆ ಸಹಕರಿಸಿದರು. ಗಣೇಶ್ ಶೆಟ್ಟಿ ವಂದಿಸಿದರು.
ಕೋಟ ವಿವೇಕ ವಿದ್ಯಾಸಂಸ್ಥೆ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಹಾಗೂ ಬ್ರಹ್ಮಾವರ ತಾಲೂಕು ಮಟ್ಟದ ಪ.ಪೂ. ಬಾಲಕ- ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ವಿದ್ಯಾಸಂಘದ ಜತೆ ಕಾರ್ಯದರ್ಶಿ ಮಂಜುನಾಥ ಉಪಾಧ್ಯ ಪಂದ್ಯಾಟ ಉದ್ಘಾಟಿಸಿದರು. ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ, ಕೋಟ ಸಿಟಿ ರೋಟರಿ ಅಧ್ಯಕ್ಷ ವೆಂಕಟೇಶ್ ಆಚಾರ್ಯ, ಕೋಟ ಸಿ.ಎ.ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ಪ.ಪೂ. ಕಾಲೇಜಿ ವಿಭಾಗದ ದೈ.ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.














Leave a Reply