Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಲಿಗ್ರಾಮದಲ್ಲಿ ಇಂದಿರಾ ಕ್ಯಾಂಟೀನ್‍ಗೆ ಕೋಟ ಬ್ಲಾಕ್ ಮನವಿ

ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವಿರೋಧಪಕ್ಷದ ನಾಯಕ ಶ್ರೀನಿವಾಸ್ ಅಮೀನ್ ನೇತ್ರತ್ವದಲ್ಲಿ ಬೆಂಗಳೂರಿನಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾದ ಲಕ್ಷ್ಮಿ ಹೆಬಾಳ್ಕರ್‍ರವರನ್ನು ಭೇಟಿಯಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಡ ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ತೆರೆಯುವ ಕುರಿತು ಮನವಿ ಸಲ್ಲಿಸಿತು.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸ್ಪಂದನೆ ನೀಡಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಲು ನಗರ ಅಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ರವರಿಗೆ ಶಿಫಾರಸ್ಸಿಗೆ ಮಾಡಿದರು.ಈ ವೇಳೆ ಕೋಟ ಬ್ಲಾಕ್‍ನ ಮುಖಂಡರಾದ ಗಣೇಶ್ ಕೆ ನೆಲ್ಲಿಬೆಟ್ಟು, ದಿನೇಶ್ ಬಂಗೇರ ಗುಂಡ್ಮಿ ಇದ್ದರು.

ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವಿರೋಧಪಕ್ಷದ ನಾಯಕ ಶ್ರೀನಿವಾಸ್ ಅಮೀನ್ ನೇತ್ರತ್ವದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಡ ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ತೆರೆಯುವ ಕುರಿತು ಮನವಿ ಸಲ್ಲಿಸಿತು.

Leave a Reply

Your email address will not be published. Required fields are marked *