
ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಚೌತಿ ಪೂಜೆಯು ವಿಜೃಂಭಣೆಯಿಂದ ನೆರವೇರಿತು. ಭಕ್ತಾದಿಗಳು ವಿವಿಧ ಭಕ್ಷ್ಯಾದಿಗಳನ್ನು ಶ್ರೀ ವಿನಾಯಕ ದೇವರಿಗೆ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ, ಆಡಳಿತ ಸಮಿತಿ ಸದಸ್ಯರಾದ ವಿನಯ್ ಕುಮಾರ್, ಜನಾರ್ದನ ಪೂಜಾರಿ, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಶಂಕರ ಪೂಜಾರಿ, ಅರ್ಚಕರಾದ ಜೀವನ್, ಅದಿತ್, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಜತೆ ಕಾರ್ಯದರ್ಶಿ ಅಶ್ವಿನಿ ಪೂಜಾರಿ, ಸಮಿತಿ ಸದಸ್ಯೆಯರಾದ ಲೋಲಾಕ್ಷಿ, ಸುನಿತಾ ಶಂಕರ ಪೂಜಾರಿ, ಪ್ರಮುಖರಾದ ರಮೇಶ್ ಕೋಟ್ಯಾನ್, ಕುಶಲ್ ಕುಮಾರ್, ರವಿ ಪಾಲನ್, ಸುಧಾಕರ್ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.













Leave a Reply