
ಕೋಟ: ಕೋಟ ಗ್ರಾಮ ಪಂಚಾಯತ್ ವತಿಯಿಂದ ಕೋಟದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಕ್ಷಯ ರೋಗಿಗಳಿಗೆ ಗುರುವಾರ ಪೌಷ್ಟಿಕ ಆಹಾರದ ಕಿಟ್‍ನ್ನು ಹಸ್ತಾಂತರಿಸಲಾಯಿತು.
ಆಯುಷ್ಮಾನ್‍ಭವ ಕಾರ್ಯಕ್ರಮದ ಅಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ, ಲೆಕ್ಕ ಸಹಾಯಕ ಶೇಖರ್ ಮರವಂತೆ ,ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಮಾಧವ ಪೈ ಸೇರಿದಂತೆ ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಹಾಜರಿದ್ದರು. ಹಿರಿಯ ಮೇಲ್ವಿಚಾರಕ ಮಂಜುನಾಥ್ ಕಾರ್ಯಕ್ರಮದ ನಿರೂಪಣೆಗೈದರು.
ಈ ಸಂದರ್ಭದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಬಗ್ಗೆ ಗ್ರಾಮ ಪಂಚಾಯತ್‍ನ ಪಾತ್ರ ಹಾಗೂ ಆರೋಗ್ಯ ಇಲಾಖೆಯ ಕಾರ್ಯವೈಖರಿ ಕುರಿತ ಮಾಹಿತಿಯನ್ನು ಪಂಚಾಯತ್ ಅಭಿವೃದ್ದಿ ಅಧಿಕಾರಿ ಸತೀಶ್ ವಡ್ಡರ್ಸೆ ನೀಡಿದರು.
ಕೋಟ ಗ್ರಾಮ ಪಂಚಾಯತ್ ವತಿಯಿಂದ ಕೋಟದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಕ್ಷಯ ರೋಗಿಗಳಿಗೆ ಗುರುವಾರ ಪೌಷ್ಟಿಕ ಆಹಾರದ ಕಿಟ್‍ನ್ನು ಹಸ್ತಾಂತರಿಸಲಾಯಿತು. ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಇದ್ದರು.













Leave a Reply