Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪ್ರತಿಭಟನಾ ನಿರತ ಲಾರಿ ಚಾಲಕ-ಮಾಲಕರ ಬೇಟಿ

ಉಡುಪಿ ಜಿಲ್ಲೆಯ ಕೋಟದ ಮೂರುಕೈನಲ್ಲಿ ಪ್ರತಿಭಟನಾ ನಿರತ ಲಾರಿ ಹಾಗೂ ಟೆಂಪೋ ಚಾಲಕ-ಮಾಲಕರನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು.

ಕಳೆದ ಒಂದು ತಿಂಗಳಿಂದ ರಾಜ್ಯ ಸರಕಾರದ ಜನವಿರೋಧಿ ನೀತಿಗಳಿಂದಾಗಿ ಕಲ್ಲು, ಮಣ್ಣು ಸಹಿತ ಯಾವುದೇ ಕಟ್ಟಡ ಸಾಮಗ್ರಿಗಳನ್ನು ಸಾಗಿಸಲಾಗದೆ ಜಿಲ್ಲೆಯ ಲಾರಿ ಮತ್ತು ಟೆಂಪೋ ಚಾಲಕ-ಮಾಲಕರು ಹಾಗೂ ಜನಸಾಮಾನ್ಯರು ರೋಸಿಹೋಗಿದ್ದಾರೆ. ಹೊಸ ನಿಯಮದ ವಿರುದ್ಧ ನಡೆಯುತ್ತಿರುವ ಜನಪರ ಹೋರಾಟಕ್ಕೆ ಭಾರತೀಯ ಜನತಾ ಪಾರ್ಟಿ ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದರು.

ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ಮೂಲಕ ನಿಯೋಗ ಸಂಬಂಧಪಟ್ಟ ಅಧಿಕಾರಿಗಳ ಜೊತೆ ವಿಚಾರ ವಿನಿಮಯ ನಡೆಸಲಿದೆ. ಸಮಸ್ಯೆ ಬಗೆಹರಿಯದಿದ್ದಲ್ಲಿ ಭಾರತೀಯ ಜನತಾ ಪಾರ್ಟಿ ಲಾರಿ ಚಾಲಕ-ಮಾಲಕರ ಸಂಘದ ಬೆಂಬಲಕ್ಕೆ ನಿಲ್ಲಲಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *