Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ- ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ” ಆಂದೋಲನ, ಬೀದಿ ನಾಟಕ ಪ್ರದರ್ಶನ

ಕೋಟ: ಕೇಂದ್ರ ಸರಕಾರದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ” ಆಂದೋಲನದ ಯೋಜನೆಯಡಿ ಉಡುಪಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಶ್ರಯದಲ್ಲಿ ಕೋಟ ಎ.ಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ದಡಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಗುರುವಾರ ಹಮ್ಮಿಕೊಂಡಿತು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಸ್ವಚ್ಛತಾ ರಾಯಭಾರಿ ಜೋಸೆಫ್ ಜಿ.ಎಸ್. ರೆಬೆಲ್ಲೊ ಇವರ ನೇತೃತ್ವ ವಹಿಸಿದ್ದರು. ಕೋಟ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ವಚ್ಛತೆ ಬಗ್ಗೆ ಚಕ್ರಪಾಣಿ, ಮೈಸೂರು ಮತ್ತು ತಂಡದವರಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಇದೇ ವೇಳೆ ಉಡುಪಿ ಎ.ಪಿ.ಎಂ.ಸಿ ಸಮಿತಿಯ ಮಾಜಿ ಉಪಾಧ್ಯಕ್ಷ ಪಿ. ಕೃಷ್ಣ ಪೂಜಾರಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಬಿತ್ತಿ ಪತ್ರವನ್ನು ಸಾರ್ವಜನಿಕರಿಗೆ,ವ್ಯಾಪರಸ್ಥರಿಗೆ ವಿತರಿಸಿದರು. ಹಾಗೂ ಸಮಿತಿಯ ಕಾರ್ಯದರ್ಶಿ ಗಾಯಿತ್ರಿ ರಾವ್, ಮತ್ತು ಸಿಬ್ಬಂದಿ ವರ್ಗದವರು ಹಾಗೂ ಉಪ ಮಾರುಕಟ್ಟೆ ಪ್ರಾಂಗಣದ ವ್ಯಾಪಾರಸ್ಥರು,ಸಾರ್ವಜನಿಕರು ಭಾಗವಹಿಸಿದ್ದರು.

ಅಕ್ಟೋಬರ್ 02 ರಂದು ಉಡುಪಿ ಎಪಿಎಂಸಿ ವತಿಯಿಂದ ಬೆಳಿಗ್ಗೆ 8.30 ಗಂಟೆಗೆ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾರುಕಟ್ಟೆ ಸಮಿತಿ ಕೋರಿದೆ.

ಕೋಟ ಎ.ಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಉಡುಪಿ ಎ.ಪಿ.ಎಂ.ಸಿ ಸಮಿತಿಯ ಮಾಜಿ ಉಪಾಧ್ಯಕ್ಷ ಪಿ. ಕೃಷ್ಣ ಪೂಜಾರಿ ಚಾಲನೆ ನೀಡಿದರು.

Leave a Reply

Your email address will not be published. Required fields are marked *