
ಕೋಟ: ಯಕ್ಷಗಾನ ಕೇಂದ್ರದಲ್ಲಿ ನಡೆದ ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಯಕ್ಷಸಿರಿ ಶಿಕ್ಷಕಿಯರ ಯಕ್ಷಗಾನ ತಂಡ, ಕುಂದಾಪುರ ವಲಯ ಇವರು ವೀರ ಘಟೋದ್ಗಜ ಪ್ರಸಂಗವನ್ನು ಪ್ರಸ್ತುತಪಡಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕ ಮತ್ತು ಗುಂಡ್ಮಿ ಯಕ್ಷಗಾನ ಕಲಾಕೇಂದ್ರದ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವೇಕ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಜಗದೀಶ ನಾವಡ ಶಿಕ್ಷಕರು ಸಮಾಜದ ಜೊತೆಯಲ್ಲಿ ಹೇಗಿರಬೇಕೆಂದು ದಿಕ್ಸೂಚಿ ಭಾಷಣ ಮಾಡಿದರು.
ಕ.ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಶುಭ ಹಾರೈಸಿದರು. ಯಕ್ಷಗಾನ ನಿರ್ದೇಶಕ ರಾಜು ಪೂಜಾರಿ ಅವರನ್ನು ಗೌರವಿಸಲಾಯಿತು.
ಕಲಾ ಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ಉಪಸ್ಥಿತರಿದ್ದರು. ಕ.ಸಾ.ಪ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಸ್ವಾಗತಿಸಿದರು. ಶ್ರೀಪತಿ ಹೇರಳೆ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.
ಯಕ್ಷಗಾನ ಕೇಂದ್ರದಲ್ಲಿ ನಡೆದ ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಯಕ್ಷಗಾನ ನಿರ್ದೇಶಕ ರಾಜು ಪೂಜಾರಿ ಅವರನ್ನು ಗೌರವಿಸಲಾಯಿತು.
Leave a Reply