News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋμï ಹುಲಿ ಉಗುರು ಧರಿಸಿದ ಆರೋಪದಲ್ಲಿ ಜೈಲು ಸೇರಿದ ಬೆನ್ನಲ್ಲೇ ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂದು ದೂರು ದಾಖಲಾಗಿದೆ. ಅಲ್ಲದೇ ಗೌರಿಗದ್ದೆಯ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಬಿಗ್ ಬಾಸ್‍ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್‍ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್‍ಬಾಸ್ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ ಅರೆಸ್ಟ್ ಆಗಿದ್ದಾರೆ .ವರ್ತೂರು ಸಂತೋಷ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ಧ ಅರಣ್ಯ ಅಧಿಕಾರಿಗಳು ಎಫ್‍ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಅವರನ್ನು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ನ್ಯಾಯಾಲಯದ ಆದೇಶದಂತೆ ವರ್ತೂರು ಸಂತೋಷ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾನು ವ್ಯಕ್ತಿಯೋರ್ವನಿಂದ ಹುಲಿ ಉಗುರು ಖರೀದಿಸಿದ್ದೇನೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರ ಎನ್ನಲಾಗಿದೆ.ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3 ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *