
ಕೋಟ : ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಇದರ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಇದರ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು, ಮೂಡುಬಿದಿರೆ ರಸ ಶಾಸ್ತ್ರ ವಿಭಾಗ ಪ್ರಾಧ್ಯಾಪಕ ಡಾ| ಬಿ. ವಿಜಯಚಂದ್ರ ಶೆಟ್ಟಿ, ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ ನಾಯಕನಾದವನು ನಾಯಕತ್ವಗುಣವನ್ನು ಮೈಗೂಡಿಸಿಕೊಂಡು ತನ್ನ ಏಳಿಗೆಯೊಂದಿಗೆ ಇತರರ ಏಳಿಗೆಗೆ ಪಾತ್ರರಾಗಿ ಸಂಸ್ಥೆ ಹಾಗೂ ಸಮಾಜದ ಸರ್ವತೋಮುಖ ಶ್ರೇಯಸ್ಸಿಗೆ ಕಾರಣರಾಗಬೇಕು ಎಂದರು.
ಕಾಲೇಜಿನ ಚೇರ್ಮ್ಯಾನ್ ತಾರನಾಥ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸ್ಮಿತಾಮೋಲ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಕಾಲೇಜಿನ ಉಪನ್ಯಾಸಕಿ ವೀಣಾ ಡಿ’ಸೋಜಾ ಸ್ವಾಗತಿಸಿ, ಉಪನ್ಯಾಸಕಿ ಪೂರ್ಣಿಮ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕರಾದ ಸುಕುಮಾರ್ ಶೆಟ್ಟಿಗಾರ್ ಅತಿಥಿ ಪರಿಚಯಿಸಿದರು., ಉಪನ್ಯಾಸಕಿ ಅಮಿಷಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ನಾಯಕ ಕೋಟೇಶ್ ಎಮ್.ಎಚ್. ವಂದಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಕೀರ್ತನ ಪ್ರಭು ಹಾಗೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಇದರ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಇದರ ವಿದ್ಯಾರ್ಥಿ ಸಂಘವನ್ನು ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು, ಮೂಡುಬಿದಿರೆ ರಸ ಶಾಸ್ತ್ರ ವಿಭಾಗ ಪ್ರಾಧ್ಯಾಪಕ ಡಾ| ಬಿ. ವಿಜಯಚಂದ್ರ ಶೆಟ್ಟಿ, ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ಕಾಲೇಜಿನ ಚೇರ್ಮ್ಯಾನ್ ತಾರನಾಥ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸ್ಮಿತಾಮೋಲ್ ಮತ್ತಿತರರು ಇದ್ದರು.
Leave a Reply