
ಕೋಟ: ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್ ಕೋಟತಟ್ಟು ಗ್ರಾಮಪಂಚಾಯತ್ ಹಾಗೂ ಅದರ ಸಿಂಧೂರ ಸಂಜೀವಿನಿ ಒಕ್ಕೂಟ ಇದರ ಸಹಯೋಗದೊಂದಿಗೆ ೧೮೫ನೇ ಭಾನುವಾರ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನ ಕೋಟತಟ್ಟು ಪಡುಕರೆ ಬೀಚ್ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ,ಉಪಾಧ್ಯಕ್ಷೆ ವಸಂತಿ ಹಂದಟ್ಟು, ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಭಾ ಕೆ ಹಂದಟ್ಟು, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್,ಸಂಯುಕ್ತ ಸಂಘಗಳ ಒಕ್ಕೂಟದ ಸಂಚಾಲಕ ಸತ್ಯನಾರಾಯಣ ಆಚಾರ್,ಸಿಂಧೂರ ಸಂಜೀವಿನಿ ಒಕ್ಕೂಟದ ಸುಜಾತ ಉದಯ್ ತಿಂಗಳಾಯ ಮತ್ತಿತರರು ಉಪಸ್ಥಿತರಿದ್ದರು. ಸುಮಾರು ೩೫ಅಧಿಕ ಚೀಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.
ಪಂಚವರ್ಣ ಸಂಸ್ಥೆಯಿAದ ೧೮೫ನೇ ಭಾನುವಾರ ಪರಿಸರಸ್ನೇಹಿ ಅಭಿಯಾನ ಕೋಟತಟ್ಟು ಪಡುಕರೆ ಬೀಚ್ ಸ್ವಚ್ಛತಾ ಕಾರ್ಯಕ್ರಮ ಜರಗಿತು.
Leave a Reply