News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾರಂಪಳ್ಳಿ- ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ
ಅಭಿವೃದ್ಧಿಯ ಹೆಸರಿನಲ್ಲಿ ಕೃಷಿ ಭೂಮಿಗೆ ಸಂಕಷ್ಟ -ಶೇಖರ್ ಆಸ್ಪತ್ರೆ ಮುಖ್ಯಸ್ಥ ಡಾ.ಪಿ ವಿಷ್ಣುಮೂರ್ತಿ ಐತಾಳ್

ಕೋಟ: ಕೃಷಿ ಕ್ಷೇತ್ರಕ್ಕೆ ಸರಕಾರ ಹೆಚ್ಚಿನ ಪ್ರೋತ್ಸಾಹ ನೀಡಿದ್ದಲ್ಲಿ ಕೃಷಿ ಕಾಯಕ ಉಳಿಯಲು ಸಾಧ್ಯ ಎಂದು ಬೆಂಗಳೂರು ಶೇಖರ್ ಆಸ್ಪತ್ರೆ ಇದರ ಮುಖ್ಯಸ್ಥ ಡಾ.ಪಿ ವಿಷ್ಣುಮೂರ್ತಿ ಐತಾಳ್ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ಗೆಳೆಯರ ಬಳಗ ಕಾರ್ಕಡ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಕೋಟ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು ಇವರ ಸಹಬಾಗಿತ್ವದಡಿ ರೈತರೆಡೆಗೆ ನಮ್ಮ ನಡಿಗೆ 31 ನೇ ಮಾಲಿಕೆ ಕಾರ್ಯಕ್ರಮ ಪಾರಂಪಳ್ಳಿ ರಘು ಮಧ್ಯಸ್ಥ ಇವರನ್ನು ಗೌರವಿಸಿ ಮಾತನಾಡಿ ಅಭಿವೃದ್ಧಿ ಹೆಸರಿನಲ್ಲಿ ಕೃಷಿ ಭೂಮಿ ಲೀನವಾಗುತ್ತಿರುವದಕ್ಕೆ ಕಳವಳ ವ್ಯಕ್ತಪಡಿಸಿ ದೇಶದ ಪ್ರಧಾನಿಗೆ ಪತ್ರ ಬರೆದಿದ್ದೇನೆ ಕೃಷಿ ಅವಲಂಬಿತ ರಾಷ್ಟç ಕೃಷಿ ಸಂಪತ್ತಾಗಿ ಉಳಿಸಿಕೊಳ್ಳಲು ಸಲಹೆ ನೀಡಿದ್ದೇನೆ.ಕೃಷಿ ಕಾಯಕದಲ್ಲಿ ಸರ್ವರನ್ನು ಗೌರವಿಸಿ ಎಲ್ಲರನ್ನು ಪ್ರೋತ್ಸಾಹಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಈ ದಿಸೆಯಲ್ಲಿ ರಘು ಮಧ್ಯಸ್ಥ ಈ ಭಾಗದಲ್ಲಿ ಸಾಕಷ್ಟು ಕೃಷಿಕರನ್ನು ಪ್ರೋತ್ಸಾಹಿಸಿ ಸಮಗ್ರ ಕೃಷಿ ನೀತಿಯನ್ನು ಅನುಸರಿಸಿ ಮಾದರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಸಾಧಕ ಕೃಷಿಕ ರಘು ಮಧ್ಯಸ್ಥ ಇವರಿಗೆ ಸಾಧಕ ಕೃಷಿಕ ಪುರಸ್ಕಾರ ನೀಡಿ ಗೌರವಿಸಲಾಯಿತು .
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್ಯ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ಅನಂತಪದ್ಮನಾಭ ಐತಾಳ್, ವಿವೇಕ ವಿದ್ಯಾ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಹೇರ್ಳೆ,ವಿವೇಕ ವಿದ್ಯಾಸಂಘದ ಜತೆ ಕಾರ್ಯದರ್ಶ ಪಿ.ಮಂಜುನಾಥ್ ಉಪಾಧ್ಯಾಯ,ವಿಪ್ರ ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ವತ್ಸಲ ಸೋಮಯಾಜಿ,ರೈತ ಧ್ವನಿ ಸಂಘ ಕೋಟ. ಅಧ್ಯಕ್ಷ ಎಂ ಜಯರಾಮ ಶೆಟ್ಟಿ, ವಿದಾತ್ರಿ ರೈತ ಉತ್ಪಾದಕ ಕಂಪನಿಯ ಮುಖ್ಯಸ್ಥ ನವನೀತ್ ಶೆಟ್ಟಿ, ಯುವ ವೇದಿಕೆ ಕೂಟಮಹಾಜಗತ್ತು ಇದರ ಗೌರವಾಧ್ಯಕ್ಷ ಪಿ ವೈ ಕೃಷ್ಣ ಪ್ರಸಾದ್ ಹೇರ್ಳೆ, ಎ.ಪಿ ಎಂಸಿ ಉಡುಪಿ ಇದರ ನಿಕಟಪೂರ್ವ ಉಪಾಧ್ಯಕ್ಷ ಕೃಷ್ಣ ಪೂಜಾರಿ.ಪಿ,ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ದೇವಪ್ಪ ಪಟೆಗಾರ್,ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಕಲಾವತಿ ಅಶೋಕ್,ಪಂಚವರ್ಣದ ಸ್ಥಾಪಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.
ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸದಸ್ಯ ಕಾರ್ತಿಕ್ ಎನ್ ವಂದಿಸಿದರು.

ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ವಿವಿಧ ಸಂಘಸAಸ್ಥೆಗಳ ಸಹಭಾಗಿತ್ವದಡಿ ಸಾಧಕ ಕೃಷಿಕ ರಘು ಮಧ್ಯಸ್ಥ ಇವರಿಗೆ ಸಾಧಕ ಕೃಷಿಕ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ಅನಂತಪದ್ಮನಾಭ ಐತಾಳ್, ವಿವೇಕ ವಿದ್ಯಾ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಹೇರ್ಳೆ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *