
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ಇಲ್ಲಿ ಇತ್ತೀಚಿಗೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಕುಂದಾಪುರ ವಿಧಾನಸಭಾ ಕ್ಷೇತ್ರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕ್ರೀಡೆಯಲ್ಲಿ ಸಾಧನೆಗೈದವರನ್ನು ಗುರುತಿಸಿ ಗೌರವಿಸಲಾಯಿತು. ಪ್ರೌಢಶಾಲೆ ಶಿಕ್ಷಕಿ ಗೀತಾ, ಪ್ರಾಥಮಿಕ ಶಾಲೆ ಶಿಕ್ಷಕಿ ಯಶೋಧ ಮತ್ತು ವಿದ್ಯಾರ್ಥಿ ರಿಯಾ ಶೆಟ್ಟಿ ಹಾಗೂ ದಾನಿಗಳಾದ ಉದ್ಯಮಿ ಆನಂದ್ ಸಿ ಕುಂದರ್ ಇವರುಗಳನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ವಡ್ಡರ್ಸೆ ಗ್ರಾಮಪಂಚಾಯತ್ ಅಧ್ಯಕ್ಷ ಲೋಕೇಶ್,ಸದಸ್ಯರಾದ ತೀರ್ಥನ, ರಮ್ಯಾ, ಸ್ಥಳೀಯರಾದ ಹೇಮಲತ ಶೆಟ್ಟಿ ಹಾಡಿಮನೆ , ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ವಡ್ಡರ್ಸೆ ಇದರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ,ಉದ್ಯಮಿ ಸೀತಾರಾಮ್ ಆಚಾರ್ಯ, ವಿಜಯ ಬ್ಯಾಂಕ್ ನಿವೃತ್ತ ಜನರಲ್ ಮ್ಯಾನೇಜರ್ ಶುಭೋದಯ ಶೆಟ್ಟಿ ವಡ್ಡರ್ಸೆ, ಶಾಲಾ ವಾರ್ಷಿಕೋತ್ಸವ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಯಾಳಹಕ್ಳು,ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ದೇವಿ , ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ಪೂಜಾರಿ , ಜೆಸಿಐ ಸಾಲಿಗ್ರಾಮ ವಡ್ಡರ್ಸೆ ಅಧ್ಯಕ್ಷ ಪದ್ಮನಾಭ ಆಚಾರ್ಯ ಸಿಟಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದಯಾನಂದ ಆಚಾರ್ ಮುಂತಾದವರು ಉಪಸ್ಥಿತರಿದ್ದರು.
ನಂತರ ಶಾಲಾ ವಿದ್ಯಾರ್ಥಿಗಳು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮಗಳು ಜರುಗಿದವು. ಹಳೆ ವಿದ್ಯಾರ್ಥಿಗಳಿಂದ ನಾಟಕ, ಸಂಗೀತ ಕಾರ್ಯಕ್ರಮಗಳು ಜರುಗಿದವು. ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು ಹಳೆ ವಿದ್ಯಾರ್ಥಿ ಸತೀಶ್ ವಡ್ಡರ್ಸೆ, ರವಿ ಬನ್ನಾಡಿ ಉಪ್ಲಾಡಿ ಕಾರ್ಯಕ್ರಮ ನಿರೂಪಿಸಿ, ಹಳೆ ವಿದ್ಯಾರ್ಥಿ ಸತೀಶ್ ಪೂಜಾರಿ ಧನ್ಯವಾದಗೈದರು. ಮುಖ್ಯ ಶಿಕ್ಷಕಿ ಗಿರಿಜಾ, ಶಿಕ್ಷಕರಾದ ಹೇಮಲತಾ, ಯಶೋಧ, ಸುಪ್ರೀತ, ಪ್ರೇಮ,ಚೈತ್ರ ಸಹಕರಿಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ಇಲ್ಲಿ ಇತ್ತೀಚಿಗೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದಾನಿಗಳಾದ ಉದ್ಯಮಿ ಆನಂದ್ ಸಿ ಕುಂದರ್ ಇವರನ್ನು ಸನ್ಮಾನಿಸಲಾಯಿತು. ವಡ್ಡರ್ಸೆ ಗ್ರಾಮಪಂಚಾಯತ್ ಅಧ್ಯಕ್ಷ ಲೋಕೇಶ್,ಸದಸ್ಯರಾದ ತೀರ್ಥನ, ರಮ್ಯಾ, ಸ್ಥಳೀಯರಾದ ಹೇಮಲತ ಶೆಟ್ಟಿ ಮತ್ತಿತರರು ಇದ್ದರು.
Leave a Reply