
ಕೋಟ: ಸರಕಾರಿ ಪ್ರೌಢ ಶಾಲೆ ಗುಂಡ್ಮಿ-ಸಾಸ್ತಾನ ಇಲ್ಲಿನ ಶಾಲಾ ವಾರ್ಷಿಕೋತ್ಸವದ 15ನೇ ವರ್ಷದ ಸಂಭ್ರಮಾಚರಣೆಯನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ದೀಪ ಪ್ರಜ್ವಲನ ಮೂಲಕ ಉದ್ಘಾಟಿಸಿದರು. ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನವನ್ನು ಉದ್ಘಾಟಿಸಿದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಘವೇಂದ್ರ. ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಸ್ತಾನದ ವೈದ್ಯ ಡಾ.ಹೇಮಂತ್ ಕುಮಾರ್,ತಾಲ್ಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಸುಲತಾ ಹೆಗ್ಡೆ, ಹಿರಿಯರಾದ ಶೀನಯ್ಯ ಶೇರ್ವೆಗಾರ್, ಶಾಲಾಭಿವೃದ್ದಿ ಸಮಿತಿಯ ಶಿಕ್ಷಣ ತಜ್ಞರಾದ ಗಣೇಶ್ ಚಲ್ಲಮಕ್ಕಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೆ.ಸತೀಶ ಐತಾಳ ಶಾಲಾ ವಾರ್ಷಿಕ ವರದಿ ವಾಚಿಸಿದರು. ಹಿರಿಯ ಶಿಕ್ಷಕಿ ಶೈಲಾ ಹೆಚ್ ನಾಯಕ್ ಸ್ವಾಗತಿಸಿದರೆ,ಆಂಗ್ಲ ಶಿಕ್ಷಕಿ ಹೆಲೆನ್ ಬಾಂಜ್ ವಂದಿಸಿದರು.
ಸರಕಾರಿ ಪ್ರೌಢ ಶಾಲೆ ಗುಂಡ್ಮಿ-ಸಾಸ್ತಾನ ಇಲ್ಲಿನ ಶಾಲಾ ವಾರ್ಷಿಕೋತ್ಸವದ 15ನೇ ವರ್ಷದ ಸಂಭ್ರಮಾಚರಣೆಯನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ದೀಪ ಪ್ರಜ್ವಲನ ಮೂಲಕ ಉದ್ಘಾಟಿಸಿದರು. ಸಾಸ್ತಾನದ ವೈದ್ಯ ಡಾ.ಹೇಮಂತ್ ಕುಮಾರ್,ತಾಲ್ಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಸುಲತಾ ಹೆಗ್ಡೆ ಮತ್ತಿತರರು ಇದ್ದರು.
Leave a Reply