
ಕೋಟ : ಇಲ್ಲಿನ ಮಣೂರು-ಪಡುಕರೆಯ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತವೃಂದದವರ 30ನೇ ವರ್ಷದ ಶಬರಿಮಲೆ ಯಾತ್ರೆಯ ಪ್ರಯುಕ್ತ ಡಿ. 31 ರಂದು ಭಾನುವಾರ ಮಧ್ಯಾಹ್ನ 12ಕ್ಕೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿರುವುದು.
12.30 ರಿಂದ ಸಮಷ್ಟಿ ಮ್ಯೂಸಿಕಲ್ಸ್ ಕೋಟ ಇವರಿಂದ ಭಕ್ತಿ ಗಾನಸುಧೆ ಕಾರ್ಯಕ್ರಮ ನಡೆಯಲಿರುವುದು.
ಸಂಜೆ 7 ಗಂಟೆಗೆ ಕನ್ನಿಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.
ಜ.1 ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಇರುಮುಡಿ ಕಟ್ಟುವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Reply