Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಾರಂತರ ಲೋಕದಿಂದ ಸಾಹಿತ್ಯ ಕ್ಷೇತ್ರ ಇನ್ನಷ್ಟೂ ಶ್ರೀಮಂತ- ಡಾ.ಹೆಚ್ ಎಸ್ ಶೆಟ್ಟಿ

ಕೋಟ : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತರು ನುಡಿದಂತೆ ಬದುಕಿ ತೋರಿಸಿದವರು, ಅವರ ಪರಿಸರ ಕಾಳಜಿ, ಅನ್ಯಾಯದ ವಿರುದ್ಧ ಧ್ವನಿ, ಸಾಂಸ್ಕೃತಿಕ ಕ್ಷೇತ್ರದಲ್ಲೂ ವಿನೂತನ ಪ್ರಯೋಗಗಳು ಎಲ್ಲವೂ ಅವಿಸ್ಮರಣೀಯ, ಕಾರಂತರನ್ನು ಮಾತುಗಳಲ್ಲಿ ವರ್ಣಿಸಲು ಕಷ್ಟ, ಕನ್ನಡ ಸಾಹಿತ್ಯ ಕ್ಷೇತ್ರವು ಕಾರಂತರ ಲೋಕದಿಂದ ಶ್ರೀಮಂತವಾಗಿದೆ. ಇಂತಹ ಮಹಾನ್ ವ್ಯಕ್ತಿಯ ನೆನಪು ಚಿರಸ್ಥಾಯಿಯಾಗಿರಿಸಲು ಕಾರಂತ ಥೀಮ್ ಪಾರ್ಕ್ ಸಹಕಾರಿ, ಇಲ್ಲಿನ ಚಟುವಟಿಕೆಗಳು ಮಾದರಿಯಾಗಿದೆ ಎಂದು ಸಮಾಜ ಸೇವಕ, ಉದ್ಯಮಿ ಡಾ. ಹೆಚ್ ಎಸ್ ಶೆಟ್ಟಿ ಅವರು ಹೇಳಿದರು.

ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಂಗಮAದಿರ, ಗ್ರಂಥಾಲಯ, ಆರ್ಟ್ ಗ್ಯಾಲರಿ, ಸಂಗೀತ ಕಾರಂಜಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲ ಸೋಮಶೇಖರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ವಾಸು ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಸಮಾಜ ಸೇವಕ, ಉದ್ಯಮಿ ಡಾ. ಹೆಚ್ ಎಸ್ ಶೆಟ್ಟಿ ಭೇಟಿ ನೀಡಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲ ಸೋಮಶೇಖರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *