
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್‌ನ ಚಿಟ್ಟಿಬೆಟ್ಟುವಿನಲ್ಲಿರುವ ಕೊರಗ ಜನಾಂಗದವರಿಗೆ (PVTG) ಆರೋಗ್ಯ ತಪಾಸಣಾ ಶಿಬಿರ ಗುರುವಾರ ನಡೆಸಲಾಯಿತು. ಶಿಬಿರದಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡ, ದಂತ ಆರೋಗ್ಯ ಮತ್ತು ಕ್ಯಾನ್ಸರ್ ಕುರಿತು ಪರೀಕ್ಷೆ ಹಾಗೂ ಚಿಕಿತ್ಸೆ ಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಸಮುದಾಯ ಆರೋಗ್ಯ ಕೇಂದ್ರ ಕೋಟದ ಹಿರಿಯ ದಂತ ಆರೋಗ್ಯಾಧಿಕರಿ ಡಾ|ಅನಾಲಿನಿ , ಎನ್‌ಸಿಡಿ ವೈದ್ಯಾಧಿಕಾರಿ ಡಾ| ಯಶಶ್ರೀ ಶೆಟ್ಟಿ ಹಾಗೂ ತಂಡದವರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಕೊರಗ ಕಾಲೋನಿ ನಿವಾಸಿಗಳು ಉಪಸ್ಥಿತರಿದ್ದರು.
ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಚಿಟ್ಟಿಬೆಟ್ಟುವಿನಲ್ಲಿರುವ ಕೊರಗ ಜನಾಂಗದವರಿಗೆ ಆರೋಗ್ಯ ತಪಾಸಣಾ ಶಿಬಿರ ಜರಗಿತು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಸಮುದಾಯ ಆರೋಗ್ಯ ಕೇಂದ್ರ ಕೋಟದ ಹಿರಿಯ ದಂತ ಆರೋಗ್ಯಾಧಿಕರಿ ಡಾ|ಅನಾಲಿನಿ ಮತ್ತಿತರರು ಇದ್ದರು.
Leave a Reply