Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಸಮಾಜ ಸೇವಾ ಸಂಘ  ಉದ್ಘಾಟನೆ

ಕೋಟ: ವಿವೇಕ ಪದವಿಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ಸಮಾಜ ಸೇವಾ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟಕರಾಗಿ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮುರಳಿ ಕಡೆಕಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ನಾವು ಸಮಾಜ ಜೀವಿಗಳು ಸಮಾಜವನ್ನು ಬಿಟ್ಟು ಏಕಾಂಗಿಯಾಗಿ ಬದುಕಲಾರೆವು ಸಮಾಜದ ಕುರಿತಾಗಿ ನಮ್ಮ ಋಣ ಇದ್ದೆ ಇರುತ್ತದೆ ಆದ್ದರಿಂದ ಸಮಾಜದ ನಾಗರೀಕರಾಗಿ ಸಮಾಜ ಸೇವೆಯನ್ನು ಮಾಡುವುದರ ಮೂಲಕ ಸಮಾಜದ ಋಣವನ್ನು ತೀರಿಸಬೇಕು ಅದು ಇಂತಹ ಸೇವಾ ಸಂಘದಿAದ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ  ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಂಘದ ಸಂಚಾಲಕ  ಅಶೋಕ್ ಕುಮಾರ್ ಶೆಟ್ಟಿ ವಂದಿಸಿದರು.ವಿದ್ಯಾರ್ಥಿನಿ ಕುಮಾರಿ  ಸಾತ್ವಿಕಾ ಕಾರ್ಯಕ್ರಮ ನಿರೂಪಿಸಿದರು.

ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ಸಮಾಜ ಸೇವಾ ಸಂಘವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮುರಳಿ ಕಡೆಕಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ  ಜಗದೀಶ ನಾವಡ, ಸಂಘದ ಸಂಚಾಲಕ  ಅಶೋಕ್ ಕುಮಾರ್ ಶೆಟ್ಟಿ ಮತ್ತಿತತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *