
ಕೋಟ: ಗ್ರಾಮೀಣ ಪ್ರದೇಶದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ಧತೆ ಸಂಬಂಧಿಸಿದAತೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಮತ್ತು ನರೇನ್ ಅಕಾಡೆಮಿ ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ 30 ಗಂಟೆಗಳ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಆ: 16 ರಂದು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಮಣೂರು ಇವರು ಉದ್ಘಾಟಿಸಿ, ತರಬೇತಿಯ ಪ್ರಯೋಜನ ಪಡೆದು, ಉನ್ನತ ಸರಕಾರಿ ಹುದ್ದೆಗಳಿಗೆ ಆಯ್ಕೆಯಾಗುವಂತೆ ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ನರೇನ್ಅಕಾಡೆಮಿ ಬ್ರಹ್ಮಾವರ ಇದರ ಚಂದ್ರಕಾAತ್, ವಿದ್ಯಾರ್ಥಿಗಳಿಗೆ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಅಗತ್ಯವಿರುವ ಕೌಶಲ್ಯಗಳನ್ನು ಹೇಗೆ ಬೆಳೆಸಿಕೊಳ್ಳಬೇಕೆಂದು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುನೀತ ವಿ, ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಾಗರಿಕ ಸೇವೆ ಹಾಗೂ ಸ್ಪರ್ಧಾತ್ಮಕ ಸೇವೆಗಳಿಗೆ ಸೇರ್ಪಡೆಗೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಘಟಕರಾದ ಡಾ. ಸುಬ್ರಮಣ್ಯ ಎ, ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ರಾಜಣ್ಣ ಎಂ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಗಳಾದ ಪ್ರೊ. ರಮೇಶ ಆಚಾರ್ವಂದಿಸಿದರು.
ಕೋಟ ಪದವಿ ಕಾಲೇಜಿನಲ್ಲಿ 30 ಗಂಟೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಮಣೂರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ನರೇನ್ಅಕಾಡೆಮಿ ಬ್ರಹ್ಮಾವರ ಇದರ ಚಂದ್ರಕಾಕಾಂತ್, ಸಂಘಟಕರಾದ ಡಾ. ಸುಬ್ರಮಣ್ಯ ಎ, ಇತಿಹಾಸ ವಿಭಾಗದ ಮುಖ್ಯಸ್ಥರಾದ ರಾಜಣ್ಣ ಎಂ ಮತ್ತಿತರರು ಇದ್ದರು.













Leave a Reply