
ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ
2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು 14.09.2024 ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಮುಂದುವರಿದು, ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 30.09.2024ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು WWW.uahs.edu.in ವೈಬ್ ಸೈಟ್ನಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌಪ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 30.09.2024ರ ಒಳಗೆ ಸಲ್ಲಿಸಬಹುದಾಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45% (ಕನಿಷ್ಠ ಶೇ. 40% ಪ.ಜಾ. ಮತ್ತು ಪ.ಪಂ./ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್‌ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ /ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ
ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ, ಕರ್ನಾಟಕ ಕಾಲೇಜು ಮತ್ತು ವಿಳಾಸ :
ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ – 576213, ಉಡುಪಿ ಜಿಲ್ಲೆ ಪ್ರಾಂಶುಪಾಲರು: 9480838208, ಕಛೇರಿ : 9108241342, 9686405090 E-mail: princi-brahmavar@uahs.edu.in Website: www.uahs.edu.in
Leave a Reply