News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ರಚನೆ

ಕುಂದಾಪುರ: ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.

ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಮಹಾಲಿಂಗ ನಾಯ್ಕ್‌ ಮೆಟ್ಟಿನಹೊಳೆ ಕಾಲ್ತೋಡು, ಧನಾಕ್ಷಿ ವಿಶ್ವನಾಥ ಯಡ್ತರೆ ಬೈಂದೂರು, ಸುಧಾ ಕೆ ಪಡುವರಿ ಬೈಂದೂರು, ಕೆ. ಬಾಬು ಶೆಟ್ಟಿ ತಗ್ಗರ್ಸೆ ಬೈಂದೂರು, ಸುರೇಂದ್ರ ಶೆಟ್ಟಿ ಕೋಟೇಶ್ವರ ಕುಂದಾಪುರ, ಅಭಿಲಾಷ್‌ ಪಿ.ವಿ ಮಂಗಳೂರು, ಯು. ರಾಜೇಶ್‌ ಕಾರಂತ್‌ ಉಪ್ಪಿನಕುದ್ರು ಕುಂದಾಪುರ, ರಘುರಾಮ ದೇವಾಡಿಗ ಆಲೂರು ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ. ದೇವಳದ ಕಾರ್ಯನಿರ್ವಾಹಕ ಅಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಸದಸ್ಯರನ್ನು ಓರ್ವರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *