News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಸುಳ್ಳು ಪ್ರಕರಣವೆಂದು ಸಲ್ಲಿಸಿದ ‘ಬಿ’ ವರದಿಯಲ್ಲಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ಉಡುಪಿಯ ಜಿಲ್ಲಾ ಪೋಕ್ಸೋ ನ್ಯಾಯಾಲಯ

ಉಡುಪಿ ಜಿಲ್ಲೆ ಬೈಂದೂರು ಠಾಣಾ ವ್ಯಾಪ್ತಿಯ ನೊಂದ ಬಾಲಕನೊಬ್ಬ ಸ್ಥಳೀಯ ಮಸೀದಿಗೆ ನಮಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿಯಾದ ಫೈಜಲ್ ಬ್ಯಾರಿ ಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ ಆಖಿಲಾ ಮತ್ತು ಮೊಹಾಜಮ್‌ರವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಅದರಂತೆ ಪ್ರಕರಣದ ಅಕ್ರ ಸಂಖ್ಯೆ 85/2022ರಂತೆ ದೂರು ಪೋಕ್ಸೋ ನ್ಯಾಯಾಲಯಕ್ಕೆ ‘ಬಿ’ ಅಂತಿಮ ವರದಿಯನ್ನು ಸಲ್ಲಿಸಿರುತ್ತಾರೆ.

ಸದ್ರಿ ವರದಿಯ ಆಧಾರದ ಮೇಲೆ ಪೊಲೀಸರ ‘ಬಿ’ ವರದಿಯನ್ನು ಪ್ರಶ್ನಿಸಿ ನೊಂದ ಬಾಲಕ ನ್ಯಾಯಾಲಯಕ್ಕೆ ಹಾಜರಾಗಿ ವೈದ್ಯರು, ಇತರ ಸಾಕ್ಷಿಗಳನ್ನು ತನ್ನ ಪರವಾಗಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಿರುತ್ತಾನೆ. ಸದ್ರಿ ಸುಧೀಘ್ರ ವಿಚಾರಣೆ ನಡೆಸಿದ ನ್ಯಾಯಾಧೀಶರು ಮೇಲ್ನೋಟಕ್ಕೆ ಪ್ರಕರಣ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪೊಲೀಸರ ‘ಬಿ’ ವರದಿಯನ್ನು ತಿರಸ್ಕರಿಸಿ ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರುವಾಗುವಂತೆ ಸಮನ್ಸ್ ನೀಡಿ ಆರೋಪಿಗಳ ಮೇಲೆ ಮರು ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣರವರು ಆದೇಶ ಮಾಡಿರುತ್ತಾರೆ. ಈ ಪ್ರಕರಣದಲ್ಲಿ ಫಿರ್ಯಾದಿ, ನೊಂದ ಬಾಲಕನ ಪರವಾಗಿ ಉಡುಪಿಯ ನ್ಯಾಯವಾದಿ ಚೇರ್ಕಾಡಿ ಅಖಿಲ್ ಬಿ. ಹೆಗ್ಡೆ ವಾದ ಮಂಡಿಸಿದರು.

Leave a Reply

Your email address will not be published. Required fields are marked *