ಉಡುಪಿ : ಕಾಂಗ್ರೆಸ್ ಮುಖಂಡನ ಪುತ್ರನ ಥಾರ್ ಜೀಪ್ ಗೆ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ.
ಹೌದು ಕಾಂಗ್ರೆಸ್ ಮುಖಂಡ, ಸಹಕಾರಿ ಧುರೀಣ ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯ ಓವರ್ ಸ್ಪೀಡ್ ಗೆ ರಿಕ್ಷಾ ಚಾಲಕರೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದ ಭಯಾನಕ ಆ್ಯಕ್ಸಿಡೆಂಟ್ ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅಪಘಾತದ ತೀವ್ರತೆಯನ್ನು ತೋರಿಸುತ್ತದೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿಯವರ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಹಿಟ್ ಆ್ಯಂಡ್ ರನ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಅಮಾಯಕನನ್ನು ಬಲಿ ಪಡೆದ ಕಾಂಗ್ರೆಸ್ ಮುಖಂಡನ ಪುತ್ರನ ಐಷಾರಾಮಿ ಥಾರ್ ಜೀಪ್…!!















Leave a Reply