Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮಂಜೂರು…!!

ಉಡುಪಿ :  ಕಾರ್ಕಳದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಯುವತಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ಆರೋಪಿಗಳಾಗಿರುವ ಮೂವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸಂತ್ರಸ್ತೆಯನ್ನು ಅಪಹರಿಸಿದ ಬಳಿಕ ಆರೋಪಿಗಳು ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಲಾಗಿದೆ.


ಇನ್ಸ್ಟಾಗ್ರಾಮ್ ಸ್ನೇಹಿತನೊಬ್ಬ 21 ವರ್ಷದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಘಟನೆ ಆಗಸ್ಟ್ 24 ರಂದು ಉಡುಪಿ ಜಿಲ್ಲೆಯ ಕಾರ್ಕಳ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಪ್ರಮುಖ ಆರೋಪಿ ಮುಸ್ಲಿಂ ಧರ್ಮದವನಾಗಿದ್ದ ಆಗಿದ್ದರಿಂದ ಕೋಮು ತಿರುವು ಪಡೆದಿತ್ತು.

ಕಾರ್ಕಳ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನೆಡೆಸಿದ ಮೇಲೆ ಪ್ರಕರಣ ತಿರುವು ಪಡೆದುಕೊಂಡಿತ್ತು.

ಆರೋಪಿಗಳನ್ನು ಕಾರ್ಕಳ ಪಟ್ಟಣದ ಅಲ್ತಾಫ್ (34), ಸವಿಯೋ ರಿಚರ್ಡ್ ಕ್ವಾಡ್ರೋಸ್ (35) ಮತ್ತು ಅಭಯ್ (23) ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿಗಳು ಮೂರು ತಿಂಗಳ ಕಾಲ ಇನ್ಸ್ಟಾಗ್ರಾಮ್ ನಲ್ಲಿ ಸ್ನೇಹಿತರಾಗಿದ್ದರು.

ಆರೋಪಿ ಮತ್ತು ಸಂತ್ರಸ್ತೆ ಒಂದೇ ಜಾಗಕ್ಕೆ ಸೇರಿದವರು. ಇನ್ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಸ್ನೇಹಿತನಾಗಿದ್ದ ಆರೋಪಿ ಅಲ್ತಾಫ್ ಸಂತ್ರಸ್ತೆಗೆ ಕರೆ ಮಾಡಿ ಆಕೆಯ ಕೆಲಸದ ಸ್ಥಳದ ಸಮೀಪವಿರುವ ನಿರ್ದಿಷ್ಟ ಸ್ಥಳಕ್ಕೆ ಬರುವಂತೆ ಹೇಳಿದ್ದ. ಸಂತ್ರಸ್ತೆ ನಿರ್ದಿಷ್ಟ ಸ್ಥಳಕ್ಕೆ ತಲುಪಿದಾಗ, ಅಲ್ಲಿಂದ ಆಕೆಯನ್ನು ಅಪಹರಿಸಲಾಯಿತು.

ಮಾದಕ ವಸ್ತು ಬೆರೆಸಿದ ಪಾನೀಯವನ್ನು ಸೇವಿಸುವಂತೆ ಒತ್ತಾಯಿಸಲಾಯಿತು ಮತ್ತು ಆರೋಪಿಯು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಪರಾಧ ಎಸಗಿದ ಬಳಿಕ ಆರೋಪಿ ಸಂತ್ರಸ್ತೆಯನ್ನು ಆಕೆಯ ಮನೆಗೆ ಬಿಟ್ಟು ಹೋಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ.

Leave a Reply

Your email address will not be published. Required fields are marked *