ವರದಿ : ಅಶ್ವಿನಿ ಅಂಗಡಿ
ಬೆಂಗಳೂರು: ಚಾಲುಕ್ಯ ಉತ್ಸವ ಆಯೋಜಿಸುವ ಹಿನ್ನೆಲೆಯಲ್ಲಿ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಮತ್ತು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಇಂದು ಬಾಗಲಕೋಟೆಯ ಜನಪ್ರತಿನಿಧಿಗಳ ಜೊತೆ ಉತ್ಸವದ ರೂಪುರೇಷೆಗಳ ಕುರಿತು ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು.
ಈ ಸಂದರ್ಭದಲ್ಲಿ, ಶಾಸಕ ಸಚಿವ ಎಚ್.ವೈ.ಮೇಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ವಿಜಯಾನಂದ ಕಾಶಪ್ಪನವರ್, ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಎಚ್.ಪೂಜಾರ್, ಉಮಾಶ್ರೀ, ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


















Leave a Reply