
ಕೋಟ: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬ್ರಹ್ಮಾವರ ತಾಲೂಕಿನ ವಿದ್ಯಾರ್ಥಿಗಳು ರಾಜ್ಯಕ್ಕೆ ಮಾದರಿಯಾಗಿದ್ದಾರೆ. ವಲಯದ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಪಟ್ಟ ಶ್ರಮ ಹಾಗೂ ವಿದ್ಯಾರ್ಥಿಗಳು ತೋರಿದ ಉತ್ಸಾಹದಿಂದಾಗಿ ಈ ಬಾರಿ ಹಲವು ವಿದ್ಯಾರ್ಥಿಗಳು ತಾಲೂಕಿಗೆ ಹೆಮ್ಮೆ ತಂದಿದ್ದಾರೆ.
ಅದರಲ್ಲೂ ಕೋಟ ವಿವೇಕ ಸಂಸ್ಥೆಯ ನಿಧಿ ಎಮ್ ಪೈ 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಸ್ಥಾನ ಗಳಿಸಿರುವುದು ಅತೀವ ಸಂತೋಷದ ವಿಚಾರವಾಗಿದೆ ಎಂದು ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುo ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿ ನಿಧಿ.ಎಂ.ಪೈ ಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ನೊಡಲ್ ಅಧಿಕಾರಿ ನಾಗರಾಜ್ ಭಟ್, ಬ್ರಹ್ಮಾವರ ವಲಯದ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ಉಡುಪ, ಸಹ ಶಿಕ್ಷಕರ ಸಂಫದ ಅಧ್ಯಕ್ಷ ಮನೋಹರ್ ಹೆಗಡೆ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ವೆಂಕಟೇಶ್ ಉಪಸ್ಥಿತರಿದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿ ನಿಧಿ.ಎಂ.ಪೈ ಗೆ ಸನ್ಮಾನಿಸಲಾಯಿತು. ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುA ಎಸ್‌ಎಸ್‌ಎಲ್‌ಸಿ ನೊಡಲ್ ಅಧಿಕಾರಿ ನಾಗರಾಜ್ ಭಟ್, ಬ್ರಹ್ಮಾವರ ವಲಯದ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ಉಡುಪ ಇದ್ದರು.
Leave a Reply