Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಾಬುಕಳ- ಚೇತನಾ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ಪರಿಕರ ವಿತರಣೆ

ಕೋಟ: ಚೇತನಾ ಪ್ರೌಢಶಾಲೆ ಮಾಬುಕಳ ಹಂಗಾರಕಟ್ಟೆ ಇದರ ಶಾಲಾ ಪ್ರಾರಂಭೋತ್ಸವ ಹಾಗೂ ಪರಿಕರ ವಿತರಣೆ ಕಾರ್ಯಕ್ರಮ ಇತ್ತೀಚಿಗೆ ಹಮ್ಮಿಕೊಂಡಿತು. 

ಈ ವೇಳೆ ಗಣ್ಯರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತç ,ಪಠ್ಯಪುಸ್ತಕ, ನೋಟ್ ಪುಸ್ತಕ, ಬೆಲ್ಟ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
2024 25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 620 ಅಂಕಗಳನ್ನು ಪಡೆದ ಕುಮಾರಿ ವೈಷ್ಣವಿ ಅವರನ್ನು 5,000 ನಗದು ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.

ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಎನ್‌ಎಂಎoಎಸ್ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.  ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ ಭರತ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಲಾ ಹಳೇ ವಿದ್ಯಾರ್ಥಿ ಬಾಳೆಕುದ್ರು ದಿ.ವೇದವ್ಯಾಸ ಆಚಾರ್ಯ ಇವರ ಸ್ಮರಣಾರ್ಥ ಇವರ ಪತ್ನಿ  ಶುಭದಾ ವೇದವ್ಯಾಸ ಆಚಾರ್ಯ ಇವರು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸ್ಕೂಲ್ ಬ್ಯಾಗ್‌ನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪೋಷಕರು ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *