
ಕೋಟ: ಸಂವಿಧಾನದ 73ನೇ ತಿದ್ದುಪಡಿಯ ಆಶೋತ್ತರದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನಾನಾ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಗೊಳಿಸುವ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಸಂಸ್ಥೆಗೆ ವಹಿಸಲಾಗಿದೆ. ಅದರಂತೆ ಗ್ರಾಮ, ಹೋಬಳಿ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಕೆ.ಡಿ. ಪಿ. ಸಭೆ ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಜೂ. 20ರಂದು ನಡೆಯಿತು. ಮೆಸ್ಕಾಂ, ಕಂದಾಯ, ಆರೋಗ್ಯ, ಕೃಷಿ, ಸಮಾಜ ಕಲ್ಯಾಣ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಒಳಗೊಂಡAತೆ ಸುಮಾರು 17ಕ್ಕೂ ಹೆಚ್ಚು ಇಲಾಖೆಗಳು ಭಾಗವಹಿಸಿ ಇಲಾಖಾ ಕಾರ್ಯಕ್ರಮದ ಪ್ರಗತಿ ವರದಿ ಮಂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ ಇವರು ಗ್ರಾಮ ಪಂಚಾಯತ್‌ನೊoದಿಗೆ ಸಮನ್ವಯ ಸಾಧಿಸಿ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ಅಶ್ವಿನಿ, ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ರಾಬರ್ಟ್ ರೋಡ್ರಿಗಸ್, ವಿದ್ಯಾ, ಜ್ಯೋತಿ, ಕೆ ಸೀತಾ ಉಪಸ್ಥಿತರಿದ್ದರು..
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ಕಾರ್ಯದರ್ಶಿ ಸುಮತಿ ಅಂಚನ್ ವಂದಿಸಿದರು.
ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಜೂ. 20ರಂದು ವಿವಿಧ ಇಲಾಖೆಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಕೆ.ಡಿ. ಪಿ. ಸಭೆ ಇತ್ತೀಚಿಗೆ ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ಅಶ್ವಿನಿ, ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು ಇದ್ದರು.
Leave a Reply